ಮೈಸೂರು: ಶ್ರಾವಣ ಮಾಸದ ಹುಣ್ಣಿಮೆ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇಗುಲಕ್ಕೆ ಶಾಸಕ ಜಿ ಟಿ ದೇವೇಗೌಡರು
ಕುಟುಂಬ ಸಮೇತ ಭೇಟಿ ನೀಡಿ ಶ್ರೀಕಂಠೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಹುಣ್ಣಿಮೆ ಅಂಗವಾಗಿ ನಂಜುಂಡೇಶ್ವರನ ದರ್ಶನ ಪಡೆಯಲು ಬಂದಿದ್ದಾಗಿ ಜಿ.ಟಿ.ದೇವೇಗೌಡ ಮಾಧ್ಯಮದವರಿಗೆ ತಿಳಿಸಿದರು.
ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ನಡೆಸಿದ ಮೈಸೂರು ಚಲೋ ಪಾದಯಾತ್ರೆ ಯಶಸ್ವಿಯಾಗಿದೆ.ಈಗ ಚೆಂಡು ನ್ಯಾಯಾಲಯದ ಅಂಗಳದಲ್ಲಿದೆ ಎಂದು ಪ್ರಶ್ನೆಯೊಂದಕ್ಕೆ ಜಿಟಿಡಿ ಉತ್ತರಿಸಿದರು.
ನ್ಯಾಯಾಲಯ ಯಾವ ತೀರ್ಮಾನ ತೆಗೆದುಕೊಳ್ಳುತ್ತದೊ ನೋಡಬೇಕು, ಮುಂದಿನ ದಿನಗಳಲ್ಲೂ ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಲು ನಿರ್ಧರಿಸಲಾಗಿದೆ ಎಂದು
ಮತ್ತೊಂದು ಪ್ರಶ್ನೆಗೆ ಜಿ ಟಿ ದೇವೇಗೌಡ ಹೇಳಿದರು.
ಜಿ.ಟಿ.ದೇವೇಗೌಡರೊಂದಿಗೆ ಜೆಡಿಎಸ್ ಮುಖಂಡರು ಹಾಜರಿದ್ದರು.