ಬೆಂಗಳೂರು: ನಟ ದರ್ಶನ್ ಗೆ ಜೈಲಿನಲ್ಲಿ ಕೊಡುವ ಅನ್ನ, ಸಾಂಬಾರೇ ಗತಿಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ 72 ಕಳೆದಿದೆ, ಜೈಲೂಟ ತಿನ್ನಲು ಆಗುತ್ತಿಲ್ಲ,ಆರೋಗ್ಯ ಸಮಸ್ಯೆ ಕಾಡುತ್ತಿದೆ ಆದ್ದರಿಂದ ಮನೆಯೂಟಕ್ಕೆ ಅವಕಾಶ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ.
ಮನೆ ಊಟ ಬೇಕೆಂದು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಿತು.
ಆದರೆ ಮನೆಯೂಟ ನೀಡಲು ಕೋರ್ಟ್ ಅನುಮತಿ ಕೊಟ್ಟಿಲ್ಲ,ಜತೆಗೆ ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಿತು.
ಮನೆ ಊಟ, ಮಲಗಲು ಹಾಸಿಗೆ ಹಾಗೂ ಕೆಲವು ಪುಸ್ತಕಗಳು ಬೇಕೆಂದು ನಟ ದರ್ಶನ್ ರಿಟ್ ಅರ್ಜಿ ಸಲ್ಲಿಸಿದ್ದರು.ಅರ್ಜಿಯಲ್ಲಿ ಜೈಲೂಟದಿಂದ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ಹೇಳಿದ್ದರು.
ಈ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ನಡೆಸಿತು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಸದ್ಯಕ್ಕೆ ನಟ ದರ್ಶನ್ಗೆ ಜೈಲೂಟ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿದೆ.
ಕಾರಾಗೃಹ ಇಲಾಖೆ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರು ಜೈಲಿನ ಅಧಿಕಾರಿಗಳು ಕೊಟ್ಟಿರುವ ವರದಿಯನ್ನು ಪರಿಗಣಿಸಿ ದರ್ಶನ್ ಗೆ ಮನೆ ಊಟ ಕೊಡಲು ನಿರಾಕರಿಸಿದ್ದಾರೆ.
ಸೆಂಟ್ರಲ್ ಜೈಲಿನಲ್ಲಿ ಪೌಷ್ಠಿಕ ಆಹಾರ ನೀಡಲಾಗುತ್ತಿದೆ, ಆಹಾರದಲ್ಲಿ ಸಮಸ್ಯೆ ಬಗ್ಗೆ ಇದುವರೆಗೂ ದೂರು ಬಂದಿಲ್ಲ. ದರ್ಶನ್ ಕೊಲೆ ಕೇಸ್ ನಲ್ಲಿ ಎರಡನೇ ಆರೋಪಿಯಾಗಿದ್ದು, ಆತನಿಗೆ ಮನೆಯೂಟ ನೀಡಲು ಸಾಧ್ಯವಿಲ್ಲ, ಆರೋಗ್ಯ ತಪಾಸಣೆ ವೇಳೆಯೂ ದರ್ಶನ್ ಚೆನ್ನಾಗಿಯೇ ಇದ್ದಾರೆ ಹೀಗಾಗಿ ದರ್ಶನ್ ಗೆ ಮನೆ ಊಟ ಕೊಡುವ ಅವಶ್ಯಕತೆ ಇಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಕಾರಾಗೃಹ ಇಲಾಖೆ ಜೈಲಿನ ವಕೀಲರಿಗೆ ವರದಿ ತಲುಪಿತ್ತು,ಇದೀಗ ವರದಿ ಕೋರ್ಟ್ಗೆ ಸಲ್ಲಿಸಲಾಗಿದೆ.