ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿರುವ ಫೋಟೋ ವೈರಲ್ ಆಗುತ್ತಿದ್ದಂತೆ ಸರ್ಕಾರ 7 ಮಂದಿಯನ್ನು ಅಮಾನತು ಮಾಡಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಜೈಲಿನಲ್ಲಿ ಈ ರೀತಿ ನಡೆಯಬಾರದು,7 ಮಂದಿ ಭಾಗಿಯಾಗಿದ್ದಾರೆ ಎಂಬ ವರದಿ ಬಂದ ಮೇಲೆ ಕ್ರಮ ನಡೆದಿದೆ, ಎಲ್ಲಾ ಜೈಲುಗಳಲ್ಲಿ ಜಾಮರ್, ಕ್ಯಾಮೆರಾ ಹಾಕಿದರೂ ನಡೆದಿರುವುದು ಸರಿಯಲ್ಲ ಎಂದು ಅಸಾಮಾಧಾನ ವ್ಯಕ್ತಪಡಿಸಿದರು.
ಜೈಲರ್ಸ್‌ಗಳಾದ ಶರಣ ಬಸವ ಅಮೀನ್‌ಗಡ್, ಪ್ರಭು ಎಸ್. ಖಂಡ್ರೆ, ಅಸಿಸ್ಟೆಂಟ್ ಜೈಲರ್ಸ್ ಎಲ್.ಎಸ್. ತಿಪ್ಪೇಸ್ವಾಮಿ, ಶ್ರೀಕಾಂತ್ ತಲವಾರ್, ಹೆಡ್ ವಾರ್ಡರ್ಸ್ ವೆಂಕಪ್ಪ ಕೊರ್ಟಿ, ಸಂಪತ್ ಕುಮಾರ್ ಕಡಪಟ್ಟಿ, ವಾರ್ಡರ್ ಬಸಪ್ಪ ತೇಲಿ ಅವರನ್ನು ಅಮಾತು ಮಾಡಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು.
ಈ ವಿಷಯದಲ್ಲಿ ಹಿರಿಯ ಅಧಿಕಾರಿಗಳು ತಪ್ಪು ಮಾಡಿದರೂ ಕ್ರಮ ತೆಗೆದುಕೊಳ್ಳುತ್ತೇವೆ,ನಂತರ ಫೋನ್ ಎಲ್ಲಿಂದ ಬಂತು, ಸಿಗರೇಟ್ ಬಂದಿದ್ದು ಹೇಗೆ ಎಂಬುದರ ಬಗ್ಗೆ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹಸಚಿವರು ತಿಳಿಸಿದರು.