ಬೆಳಗಾವಿ: ನಟ ದರ್ಶನ್ಗೆ ಜೈಲಿನಲ್ಲಿ ವಿಶೇಷ ವ್ಯವಸ್ಥೆ ನೀಡಿರುವ ಆರೋಪ ಸಂಬಂಧ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ವಿಚಾರದಲ್ಲಿ ಅಧಿಕಾರಿಗಳಿಂದ ಲೋಪ ಉಂಟಾಗಿದೆ,ಈ ಸಂಬಂಧ 7 ಮಂದಿ ಅಮಾನತಾಗಿದೆ,ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಲೋಪ ವಾಗಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಗೃಹ ಸಚಿವರಿಗೆ ಸೂಚಿಸಿದ್ದೇನೆ, ಅವರ ವರದಿ ಆಧಾರದಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
ನಾವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಜನರ ಪರ ಇರುವುದನ್ನು ಸಾಬೀತುಪಡಿಸಿದ್ದೇವೆ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರಿಗೆ ನಮ್ಮನ್ನು ಪ್ರಶ್ನಿಸುವ ಯಾವುದೇ ನೈತಿಕತೆ ಇಲ್ಲ ಎಂದು ಅವರು ವರದಿಗಾರರ ಪ್ರಶ್ನೆಗೆ ಸಿಎಂ ಉತ್ತರಿಸಿದರು.
ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಅದನ್ನು ವಿಭಜನೆ ಮಾಡಲಾಗುತ್ತದೆಯೆ ಎಂಬ ಮತ್ತೊಂದು ಪ್ರಶ್ನೆಗೆ ಈ ಬಗ್ಗೆ ಶಾಸಕರ ಜತೆ ಮಾತುಕತೆ ನಡೆಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.