ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿ ದರ್ಶನ್ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನ ಅಂತ್ಯವಾಗದ ಕಾರಣ ಬುಧವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಮತ್ತೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು.
ಈ ವೇಳೆ ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು.
ಅವರ ಮನವಿ ಪುರಸ್ಕರಿಸಿದ ನ್ಯಾಯಾಧೀಶರು ದರ್ಶನ್ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ನ್ಯಾಯಾಂಗ ಬಂಧನ ವಿಸ್ತರಣೆಗೊಂಡ ಬೆನ್ನಲ್ಲೇ ದರ್ಶನ್ ನನೆ ಸಂಜೆ ಅಥವಾ ರಾತ್ರಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ.