ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ತಿಳಿಸಿದೆ.
ರಾಜ್ಯ ಹಾಗೂ ಸಿಬಿಐ ನಡುವಿನ ವಾದವನ್ನು ಸುಪ್ರೀಂಕೋರ್ಟ್ ತೀರ್ಮಾನಿಸಬೇಕು, ಸಿಬಿಐ ಸಲ್ಲಿರುವ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಿ ನಿರ್ಧರಿಸುವುದು ಸರಿಯಲ್ಲ, ಹಾಗಾಗಿ ಸುಪ್ರೀಂ ಕೋರ್ಟ್ ನಲ್ಲಿಯೇ ಅರ್ಜಿ ಸಲ್ಲಿಸಿ ಎಂದು ಹೈಕೋರ್ಟ್ ಸಲಹೆ ನೀಡಿದೆ.
ಹಾಗಾಗಿ ಡಿ.ಕೆ.ಶಿವಕುಮಾರ್ ಗೆ ಸಧ್ಯಕ್ಕೆ ರಿಲೀಫ್ ಸಿಕ್ಕಂತಾಗಿದ್ದು ಮುಂದೇನು ಎಂಬುದನ್ನು ಕಾದು ನೋಡಬೇಕಿದೆ,