ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಶೀಘ್ರ ತೀರ್ಪು ನೀಡಿ:ಮೋದಿ

ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಮಕ್ಕಳ ಸುರಕ್ಷತೆಯು ಸಮಾಜಕ್ಕೆ ಗಂಭೀರ ಕಾಳಜಿಯ ವಿಷಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.

ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ದೇಶಕ್ಕೆ ತ್ವರಿತ ತೀರ್ಪಿನ ಅಗತ್ಯವಿದೆ ಎಂದು ಅವರು ತಿಳಿಸಿದರು.

ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ 2019 ರಲ್ಲಿ ತ್ವರಿತ ನ್ಯಾಯಾಲಯಗಳ ಕಾನೂನನ್ನು ಅಂಗೀಕರಿಸಲಾಗಿದೆ.

ಅಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಗಳು ಪ್ರಮುಖ ಪಾತ್ರವಹಿಸುತ್ತವೆ ನಾವು ಈ ಸಮಿತಿಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಶೀಘ್ರ ತೀರ್ಪು ನೀಡಬೇಕು ಎಂದು ಮೋದಿ ಸಲಹೆ ನೀಡಿದರು.

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಎಷ್ಟು ವೇಗವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೋ ಅದರಿಂದ ದೇಶದ ಅರ್ಧದಷ್ಟು ಜನಸಂಖ್ಯೆಗೆ ಸುರಕ್ಷತೆಯ ಭರವಸೆ ಸಿಗುತ್ತದೆ ಎಂದು ತಿಳಿಸಿದರು.