ದಸರಾ ಉದ್ಘಾಟನೆಗೆ ಸುತ್ತೂರು ಶ್ರೀ ಆಹ್ವಾನಿಸಲು ಜೀವದಾರ ಗಿರೀಶ್ ಮನವಿ

ಮೈಸೂರು: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ‌ ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸಬೇಕೆಂದು‌ ಜೀವದಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ
ಶ್ರೀಕ್ಷೇತ್ರ ಸುತ್ತೂರು ಶ್ರೀಮಠದ ಜಗದ್ಗುರು ಪೂಜ್ಯ ಡಾ. ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಜನ್ಮದಿನ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ‌ ರಕ್ತದಾನ ಶಿಬಿರದ ಉದ್ಘಾಟನೆ ವೇಳೆ ಅವರು ಮಾತನಾಡಿದರು.

ಈ ಕುರಿತು ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಟಿ.ಎಸ್.ಶ್ರೀವತ್ಸ ಅವರು ಮನವಿ ಮಾಡಿದ್ದಾರೆ, ಅದರಂತೆ ಈ ಬಾರಿ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸಬೇಕೆಂದು ಸರ್ಕಾರವನ್ನು ಗಿರೀಶ್ ಕೋರಿದರು.

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್,ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಜೆಡಿಎಸ್ ಕಾರ್ಯಾಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ಬಿಜೆಪಿ ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಲೋಹಿತ್, ಜಿ ರಾಘವೇಂದ್ರ, ಮಹೇಂದ್ರ ಶೈವ, ಪತ್ರಕರ್ತ ಮಧು ಕುಮಾರ್, ಸದಾಶಿವ, ರಶ್ಮಿ, ರಘು ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸಿಬ್ಬಂದಿ ಹಾಜರಿದ್ದರು.

ಶಿಬಿರದಲ್ಲಿ 30ಕ್ಕೂ ಹೆಚ್ಚು ಭಕ್ತಾದಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಶ್ರೀಗಳ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.