ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲಾಗುತ್ತದೆ ಎಂಬ ಊಹಾಪೋಹ ಹರಡಿರುವ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೋವಿಡ್ -19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ ಇಲ್ಲ ಎಂದು ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಬುಧವಾರ ನಡೆದ ಚರ್ಚೆಯಲ್ಲಿ ಲಾಕ್ ಡೌನ್ ಬಗ್ಗೆ ಚರ್ಚೆಯಾಗಿಲ್ಲ. ರಾಜ್ಯದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಹಾಗಾಗಿ ಈ ಅವಧಿಯಲ್ಲಿ ಲಾಕ್ ಡೌನ್ ಮಾಡುವ ಯೋಚನೆಯಿಲ್ಲ ಎಂದು ಸಚಿವರು ಹೇಳಿದರು.
ಕೋವಿಡ್ ಸೋಂಕನ್ನು ಲಘುವಾಗಿ ಪರಿಗಣಿಸಬೇಡಿ, ಕಿರಿಕಿರಿ ಅನ್ನಿಸಿದರೂ ಮಾಸ್ಕ್ ಮರೆಯಬೇಡಿ ಎಂದು ಪ್ರಧಾನಿ ಮೋದಿ ಅವರು ವೀಡಿಯೋ ಕಾನ್ಫರೆನ್ಸ್ ನಲ್ಲಿ ಏಳು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆಂದರು.
ಇದರೊಂದಿಗೆ ಪರೀಕ್ಷೆ, ಶೋಧ ಮತ್ತು ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡುವಂತೆಯೂ ಪ್ರಧಾನಿ ಸೂಚಿಸಿದ್ದಾರೆಂದು ಸುಧಾಕರ್ ತಿಳಿಸಿದರು.