ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಅವರ ರಾಜಿನಾಮೆ ಪಡಿಯಬೇಕು ಎಂದು ಸರ್ಕಾರವನ್ನು ಶಾಸಕ ಶ್ರೀವತ್ಸ ಆಗ್ರಹಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ದಿನೇಶ್ ಕುಮಾರ್ ರನ್ನು ಅಮಾನತು ಮಾಡಲಾಗಿದೆ, ಸಂಜೆಯೊಳಗೆ ಭೈರತಿ ಸುರೇಶ್ ಅವರ ರಾಜೀನಾಮೆಯನ್ನೂ ಪಡೆಯಿರಿ ಎಂದು ಆಗ್ರಹಿಸಿದರು.
ಮುಡಾದಲ್ಲಿ ಅದ್ವಾನ ನಡೆಯಲು ಸಚಿವರೇ ಕಾರಣ, ಕೇವಲ ದಿನೇಶ್ ಕುಮಾರ್ ಅಮಾನತು ಸಾಲದು ಅಕ್ರಮದಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು ಎಂದು ಶಾಸಕ ಶ್ರೀವತ್ಸ ಹೇಳಿದರು.