ನವದೆಹಲಿ: ಕೊರೊನಾ ಸೋಂಕಿನಿಂದ ಬುಧವಾರ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಗುರುವಾರ ಸಂಜೆ 4 ಗಂಟೆಗೆ ದಿಲ್ಲಿಯ ದ್ವಾರಕಾ ಸೆಕ್ಟರ್ 24ನಲ್ಲಿ ನಡೆಸಲಾಗುತ್ತದೆ.
ಸುರೇಶ್ ಅಂಗಡಿಯವರು ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿರುವ ಕಾರಣ ಬೆಳಗಾವಿಗೆ ಅವರ ಪಾರ್ಥಿವ ಶರೀರವನ್ನು ತರಲು ಅವಕಾಶವಿಲ್ಲ ಎಂದು ತಿಳಿದು ಬಂದಿದೆ.
ಲಿಂಗಾಯತ ವಿಧಿವಿಧಾನದಂತೆ, ಕೋವಿಡ್ ಮಾರ್ಗ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ ನಡೆಯಲಿದೆ.