ಮೈಸೂರು: ಬೆಳ್ಳಂ ಬೆಳಿಗ್ಗೆ ಪೊಲೀಸರು ಕರ್ಕಶ ಶಬ್ದ ಮಾಡಿಕೊಂಡು ಹೋಗುವ ವಾಹನ ಸವಾರರಿಗೆ ಚಳಿ ಬಿಡಿಸಿದ್ದಾರೆ.
ಮೈಸೂರಿನ ಸಿದ್ದಾರ್ಥ ನಗರ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನ ಸವಾರರಿಗೆ ಶಾಕ್ ನೀಡಿದರು.
ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ ಗಳನ್ನು ಸೀಜ್ ಮಾಡಿ ಕಠಿಣ ಎಚ್ಚರಿಕೆ ನೀಡಿದರು.
ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಕಳೆದ 3 ದಿನದಿಂದ ಕಾರ್ಯಚರಣೆ ನಡೆದಿದ್ದು, 94 ಬೈಕ್ ಗಳನ್ನು ಸೀಜ್ ಮಾಡಿದ್ದಾರೆ.
217 ಸೈಲನ್ಸರ್ ಗಳನ್ನು ರಸ್ತೆಯಲ್ಲಿ ಸಾಲಾಗಿ ಜೋಡಿಸಿ ರೋಡ್ ರೋಲರ್ ಮೂಲಕ ಪುಡಿ ಗಟ್ಟಿದರು.
ಕಾನೂನು ನಿಯಮ ಉಲ್ಲಂಘನೆ ಮಾಡಿದವರ ವಿರುದ್ದ ಕಠಿಣ ಕ್ರಮಕ್ಕೆ ಮುಂದಾದ ಸಿದ್ದಾರ್ಥ ನಗರ ಸಂಚಾರಿ ಠಾಣೆ ಪೊಲೀಸರು, ಮತ್ತೆ ಹೀಗೆ ಮಾಡಿದರೆ ವಾಹನ ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಸೀಜ್ ಮಾಡಿದ ವಾಹನಗಳಿಗೆ ಫೈನ್ ಹಾಕಿ ವಾರ್ನಿಂಗ್ ಕೊಟ್ಟು ಕಳುಹಿಸಿದ ಪೊಲೀಸರು ಇನ್ನುಳಿದ ವಾಹನಗಳ ಸೈಲನ್ಸರ್ ಮೇಲೆ ರೋಡ್ ರೋಲರ್ ಹತ್ತಿಸಿ ಪುಡಿಮಾಡಿದರು.