ಹೈದರಾಬಾದ್: ತೆಲಂಗಾಣ ರಾಜ್ಯದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ 6 ಮಂದಿ ಮಾವೋವಾದಿಗಳು ಹತ್ಯೆಗೀಡಾಗಿದ್ದಾರೆ.
ಇಬ್ಬರು ಭದ್ರತಾ ಪಡೆ ಯೋಧರಿಗೆ ಗಾಯವಾಗಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ.
ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಮುಂಜಾನೆ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಎನ್ಕೌಂಟರ್ ನಡೆದು 6 ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಭದ್ರಾದ್ರಿ ಕೊತಗುಡೆಂ ಜಿಲ್ಲಾ ವರಿಷ್ಠಾಧಿಕಾರಿ ರೋಹಿತ್ ರಾಜ್ ತಿಳಿಸಿದ್ದಾರೆ.