ಮಸೀದಿ ಆವರಣದಲ್ಲೇ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಭಾವೈಕ್ಯತೆ ಮೆರೆದ ಜನತೆ

ಕೊಪ್ಪಳ: ರಾಜ್ಯದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ,ಅದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿ ಕೊಪ್ಪಳದಲ್ಲಿ ಮಸೀದಿ ಆವರಣದಲ್ಲೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಸಾರ್ವಜನಿಕರು ಭಾವೈಕ್ಯತೆ ಮೆರೆದಿರುವುದು ವಿಶೇಷ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಹಿಂದೂ-ಮುಸ್ಲಿಮರು ಒಟ್ಟಿಗೆ ಸೇರಿ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ಮಸೀದಿ ಆವರಣದಲ್ಲೇ‌ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸಿ ಭಾವೈಕ್ಯತೆ ಸಾರಿದ್ದಾರೆ.

ಕಳೆದ ಮೂರು ವರ್ಷಗಳಿಂದ ಇಲ್ಲಿ ಹಿಂದೂ-ಮುಸ್ಲಿಂಮರು ಒಟ್ಟಿಗೆ ಸೇರಿ ಮಸೀದಿ ಆವರಣದಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಹಬ್ಬ ಆಚರಿಸುತ್ತಿದ್ದಾರೆ.

ಮುಸ್ಲಿಂ ಬಾಂಧವರೇ 5 ದಿನಗಳ ಕಾಲ ಪೂಜಾ ಕೈಂಕರ್ಯವನ್ನು ನೆರವೇರಿಸುವುದು ಇನ್ನೂ ವಿಶೇಷ.

ಗಣೇಶ ವಿಸರ್ಜನೆಗೂ ಮುನ್ನಾ ದಿನ ಅನ್ನಸಂತರ್ಪಣೆ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನೂ ಹಮ್ಮಿಕೊಳ್ಳಲಾಗುತ್ತದೆ.