ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗುವುದೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು
ನಗರದಲ್ಲಿ ಗುರುವಾರ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಾಜ್ಯ ಬಿಜೆಪಿ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಹಾಗಾಗಿ ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಜನ ವಿರೋಧಿ ಕಾನೂನುಗಳನ್ನು ಜಾರಿಗೊಳಿಸುತ್ತಿದೆ. ಈ ಸರ್ಕಾರ ಜನ ವಿರೋಧಿಯಾಗಿದೆ ಎಂದರು.