ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಗುಂಡಿಮಯವಾಗಿದ್ದು ಇನ್ನ 15 ದಿನದೊಳಗೆ ಗುಂಡಿಗಳನ್ನು ಮುಚ್ಚದಿದ್ದರೆ ಕಠಿಣ ಕ್ರಮ ಖಂಡಿತಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದಾಗಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಎಂಜಿನೀಯರ್‌ಗಳು, ಬಿಬಿಎಂಪಿ ಅಧಿಕಾರಿಗಳ ಜೊತೆ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು.
ನಂತನ ಮಾಧ್ಯಮದೊಂದಿಗೆ ಮಾತನಾಡಿದ ಡಿಕೆಶಿ,ಹಿರಿಯ ಅಧಿಕಾರಿಗಳು, ಮುಖ್ಯ ಎಂಜಿನೀಯರ್‌ಗಳು, ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. 15 ದಿನಗಳ ಕಾಲ ಗಡುವುದು ನೀಡಿದ್ದೇನೆ, ಎಲ್ಲಾ ಕೆಲಸಗಳನ್ನು ಬಿಟ್ಟು ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.
ಒಂದು ವೇಳೆ ಈ ಕೆಲಸ ಮಾಡದೇ ಇದ್ದರೆ ಸಂಬಂಧಪಟ್ಟವರ ಮೇಲೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ,ಯಾರು ಸಸ್ಪೆಂಡ್ ಆಗುತ್ತಾರೋ ಗೊತ್ತಿಲ್ಲ ಎಂದು ಹೇಳಿದರು.
ಸೆಪ್ಟೆಂಬರ್‌ನಲ್ಲೂ ಮಳೆ ಬರುವ ಸಾಧ್ಯತೆ ಇದೆ, ಕಂಟ್ರೋಲ್ ರೂಂ ಪ್ರತಿಯೊಂದನ್ನು ಗಮನಿಸುತ್ತಾ ಇರಬೇಕು ನೀರು ನುಗ್ಗುವುದು, ಅವಾಂತರಗಳು ಆಗುವುದನ್ನು ತಡೆಯಬೇಕು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ ಎಂದು ಡಿಕೆಶಿ ತಿಳಿಸಿದರು.
ಮಹಾತ್ಮ ಗಾಂಧೀಜಿ ಅವರು ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ನಾಯಕತ್ವ ವಹಿಸಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆಗಳಲ್ಲಿ ನವೆಂಬರ್ 2 ರಂದು ಸ್ವಚ್ಛತೆ ಬಗ್ಗೆ ಪ್ರತಿಜ್ಞೆ ಮಾಡಬೇಕು. ಅವರವರ ಮನೆಗಳನ್ನು, ಏರಿಯಾ ಗಳನ್ನು ಸ್ವಚ್ಛವಾಗಿ ಇಡುವುದರ ಬಗ್ಗೆ ಪ್ರತಿಜ್ಞೆ ಮಾಡಬೇಕು ಎಂದು ಹೇಳಿದ್ದೇನೆ ಎಂಬುದಾಗಿ ಡಿಸಿಎಂ ತಿಳಿಸಿದರು.
ರಸ್ತೆಗಳಿಗೆ ವಾಲಿದ ಮರಗಳ ಟೊಂಗೆಗಳನ್ನು ಟ್ರಿಮ್ಮಿಂಗ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಜತೆಗೆ ಒಣಗಿದ ಮರಗಳನ್ನು ತೆರವು ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.
ಸಭೆಯಲ್ಲಿ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.