ಬೆಂಗಳೂರು: ಚಾರ್ಜ್‌ಶೀಟ್‌ನಲ್ಲಿ ಇರುವ ಗೌಪ್ಯ ಮಾಹಿತಿಗಳನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೊಲೆ ಆರೋಪಿ ದರ್ಶನ್ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಸಾವಿರ ಪುಟಗಳಿರುವ ದೋಷಾರೋಪ ಪಟ್ಟಿಯನ್ನು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ.
ಆ ದೋಷಾರೋಪ ಪಟ್ಟಿಯಲ್ಲಿರುವ ಗೌಪ್ಯ ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕೆಂದು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಏನು ಮಾಡಿದ್ದಾರೆ,ದರ್ಶನ್ ರೇಣಕಾಸ್ವಾಮಿಗೆ ಯಾವ ರೀತಿ ಟಾರ್ಚರ್ ನೀಡಿದ್ದಾರೆ, ಪವಿತ್ರಾ ಗೌಡ ಹೇಳಿದ್ದೇನು, ರೇಣುಕಾಸ್ವಾಮಿ ಹತ್ಯೆಯಲ್ಲಿ ಯಾರ ಪಾತ್ರ ಏನಿದೆ ಎನ್ನುವುದರ ಸಂಪೂರ್ಣವಾದ ವಿವರ ಚಾರ್ಜ್‌ಶೀಟ್‌ನಲ್ಲಿದೆ.