ಹುಬ್ಬಳ್ಳಿ: ದೀಪಾವಳಿ ಒಳಗಡೆ ಕಾಂಗ್ರೆಸ್ ಸರ್ಕಾರ ಬುದ್ದುಹೋಗೋದು ಗ್ಯಾರಂಟಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಭವಿಷ್ಯ ನುಡಿದಿದ್ದಾರೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಪಾಪದ ಕೊಡ ತುಂಬಿದೆ, ಕಾಂಗ್ರೆಸ್ ಟೈಮ್ ಬಾಂಬ್ ಫಿಕ್ಸ್ ಮಾಡಿದೆ. ಸಿದ್ದರಾಮಯ್ಯ ಜೊತೆಗೆ ಬಂಡೆಯಂತೆ ಜೊತೆಗಿರುತ್ತೇನೆ ಎನ್ನುತ್ತಿರುವವರೇ ಡೇಂಜರ್ ಎಂದು ಎಚ್ಚರಿಸಿದ್ದಾರೆ.
ಡಿ.ಕೆ ಶಿವಕುಮಾರ್ ಒಂದು ಬಾಂಬ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಯಾವ ಯಾವ ಬಾಂಬ್ ಇಟ್ಟಿದ್ದಾರೊ ಅವರಿಗೇ ಕೇಳಬೇಕು ಎಂದು ಹೇಳಿದರು
ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಮತ್ತು ಮುಖಂಡರು ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ. ರಾಜೀನಾಮೆಗೆ ಸಮಯವನ್ನೂ ನಿಗದಿಪಡಿಸಿದ್ದಾರೆ. ಅದಕ್ಕೆ ಪೂರಕವಾಗಿ ಕೆಲವು ಸಚಿವರು ತಾವು ಸಹ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು.
ವಿವಿಧ ಹಗರಣದಗಳು ಕೇಳಿ ಬಂದಿವೆ ಹಾಗಾಗಿ ಹೆಚ್ಚು ದಿನ ಸಿದ್ದರಾಮಯ್ಯ ಮುಖ್ಯ ಮಂತ್ರಿ ಆಗಿ ಉಳಿಯುವುದಿಲ್ಲ ಎಂದು ತಿಳಿಸಿದರು.