ಮಾವುತರು,ಕಾವಾಡಿಗರಿಗೆ ಉಪಹಾರ ಬಡಿಸಿದ ಹೆಚ್.ಸಿ.ಮಹದೇವಪ್ಪ

ಮೈಸೂರು: ದಸರಾ ಅಂಗವಾಗಿ ಮಾವುತರು, ಕಾವಾಡಿ ಗಳಿಗೆ ಜಿಲ್ಲಾಡಳಿತ ಅರಮನೆ ಆವರಣದಲ್ಲಿ ಏರ್ಪಡಿಸಿದ್ದ ಉಪಹಾರದ‌ ವೇಳೆ ಸಚಿವ ಡಾ ಹೆಚ್.ಸಿ. ಮಹದೇವಪ್ಪ ಉಪಹಾರ ಬಡಿಸಿ ಕುಶಲೋಪರಿ‌ ವಿಚಾರಿಸಿದರು.

ಬಳಿಕ ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿ ಅವರುಗಳೊಂದಿಗೇ ಉಪಹಾರ ಸವಿದರು.

ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಶಾಲೆಗೆ ಚಾಲನೆ ನೀಡಿದರು,ನಂತರ ಮಾವುತ ಮತ್ತು ಕಾವಾಡಿಗರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು.

ಇದೇ ವೇಳೆ ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ಸಚಿವರು ವೀಕ್ಷಿಸಿದರು.

ಶಾಸಕ ತನ್ವೀರ್ ಸೇಠ್,ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿ ಪಂ ಸಿಇಒ ಕೆ.ಎಂ.ಗಾಯತ್ರಿ, ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮತ್ತಿತರರು ಉಪಸ್ಥಿತರಿದ್ದರು.