ಬೆಂಗಳೂರು: ಕಾಂಗ್ರೆಸ್ ನಾಯಕರು 6 ತಿಂಗಳಿಗೊಮ್ಮೆ ಅವಿಶ್ವಾಸ ನಿರ್ಣಯ ಮಂಡಿಸಲಿ. ಇದರಿಂದ ನನಗೂ 6 ತಿಂಗಳ ಕಾಲ ವಿಶ್ವಾಸ ಬರುತ್ತದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.
ವಿಧಾನಸೌಧದ ಆವರಣದಲ್ಲಿ ಸಿಎಂ ಬಿಎಸ್ ವೈ ಅವರು ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕಾಂಗ್ರೆಸ್ ನವರು ಅವಿಶ್ವಾಸ ನಿರ್ಣಯ ಮಂಡನೆ ಮಾಡುವುದರಿಂದ ನನಗೆ 6 ತಿಂಗಳ ಕಾಲ ವಿಶ್ವಾಸ ಬರುತ್ತದೆ. ನನಗೆ ವಿಶ್ವಾಸ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆಂದರು.
ರೈತರ ಪ್ರತಿಭಟನೆ ಕುರಿತು ಸಿಎಂ ಮಾತನಾಡಿ, ಇಂದು ರೈತರ ಜೊತೆಗೆ ಚರ್ಚಿಸುತ್ತೇನೆ. ಭೂ ಸುಧಾರಣಾ ಕಾಯ್ದೆಯಿಂದ ರೈತರಿಗೆ ತೊಂದರೆ ಆಗುವುದಿಲ್ಲ. ಎಂದು ಹೇಳಿದರು.