ಬಿಜೆಪಿ ನಾಯಕರ ವಿರುದ್ದ ಎಂ.ಲಕ್ಷ್ಮಣ್ ಕಿಡಿ

ಮೈಸೂರು: ಒಬ್ಬ ಶ್ರೇಷ್ಠ ನಾಯಕನ ಪದಚ್ಯುತಿ ಮಾಡುವ ಹುನ್ನಾರ ಬಿಜೆಪಿಯದ್ದು, ಸಿಎಂ ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಲು ಅವರ ಹಣೆಯಲ್ಲೇ ಬರೆದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಏನೂ ಇಲ್ಲದೆ ಇರುವ ಸಂಗತಿಯನ್ನ ಹೈಕೋರ್ಟ್ ವರೆಗೆ ತೆಗೆದುಕೊಡು ಹೋಗಿ ಹೈಕೋರ್ಟ್ ತೀರ್ಪು ಕೊಟ್ಟಿದೆ. ಮುಂದಿನ ದಿನಗಳಲ್ಲಿ ಯಾವ ರೀತಿ ಕಾನೂನಿನ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

ರಾಜ್ಯಪಾಲರು ಸಂವಿಧಾನ ವಿರೋಧಿ ನಡೆ ಅನುಸರಿಸಿದ್ದಾರೆ. ನಮ್ಮ ರಾಜ್ಯದ ಮಾನವನ್ನು ರಾಷ್ಟ್ರ ಮಟ್ಟದಲ್ಲಿ ಹಾರಾಜು ಹಾಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.

ಈ ರಾಜ್ಯಪಾಲರನ್ನ ಕೇಂದ್ರ ಸರ್ಕಾರ ವಾಪಸ್ ಕರೆಸಿಕೊಳ್ಳಬೇಕು. ಇಲ್ಲ ಅಂದ್ರೆ ಮುಂದೆ ಆಗುವಂತಹ ಘಟನೆಗೆ ಬಿಜೆಪಿಯವರೇ ಕಾರಣ ಆಗುತ್ತಾರೆ. ರಾಜ್ಯಪಾಲರು ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಎಂ.ಲಕ್ಷ್ಮಣ್ ದೂರಿದರು.

ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಕಾರಣಕ್ಕೂ ದೃತಿಗೆಡಬೇಡಬಾರದು, ಸದ್ಯಕ್ಕೆ ಹಿನ್ನೆಡೆಯಾಗಿದೆ ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆ ಇದೆ ಎಂದು ‌ವಿಶ್ವಾಸ‌ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರೇ ಮುಂದೆಯೂ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಎಂ.ಲಕ್ಷ್ಮಣ್ ಹೇಳಿದರು.ತೀರ್ಪು ಹೊರ ಬೀಳುವುದಕ್ಕೂ ಮುಂಚಿತವಾಗಿ  ವಿಜಯೇಂದ್ರ ಮಾಧ್ಯಮಗಳಲ್ಲಿ ಹೇಳಿಕೆ ಕೊಡುತ್ತಾರೆ ಅಂದರೆ, ತೀರ್ಪಿನ ಬಗ್ಗೆ ಮುಂಚಿತವಾಗಿ ತಿಳಿದಿತ್ತಾ ಎಂದು ಲಕ್ಷ್ಮಣ್ ಪ್ರಶ್ನಿಸಿದರು.

ಸಿಎಂ ಪರವಾಗಿ ನಾವು ಇದ್ದೇವೆ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಎಂ.ಲಕ್ಷ್ಮಣ್ ಹೇಳಿದರು.