ಮುಡಾ ಕೇಸ್ ಸಿಬಿಐ ತನಿಖೆಗೆ ಒಪ್ಪಿಸುವಂತೆ ಹೈಕೋರ್ಟ್‌ಗೆ ಅರ್ಜಿ:ಸ್ನೇಹಮಯಿ ಕೃಷ್ಣ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ  ವೆಬ್‌ಸೈಟ್‌ನಲ್ಲಿನ ಆದೇಶ ಪ್ರತಿಯಿಂದಲೇ ಎಫ್‌ಐಆರ್ ಮಾಡಿಕೊಳ್ಳಬಹುದು, ಇವತ್ತೇ ಎಫ್‌ಐಆರ್ ದಾಖಲಾಗುತ್ತದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ನಮಗೆ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ, ಹಾಗಾಗಿ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ ಕೊಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಸಿಎಂ ಮೇಲಿನ ಮುಡಾ ಪ್ರಕರಣದಲ್ಲಿ ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ ಎಂದಿದ್ದಾರೆ.

ಮುಡಾ ನಿವೇಶನ ಹಂಚಿಕೆಯಲ್ಲಿ ಪ್ರಭಾವ ಬೀರಿದ್ದಾರೆಂಬ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತಕ್ಕೆ ಹೈಕೋರ್ಟ್ ಆದೇಶ ಹೊರಡಿಸಿದೆ. 3 ತಿಂಗಳ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಗಡುವು ವಿಧಿಸಿದೆ.