ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ.
ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ನೀಡಿದೆ.
ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಸೋಮವಾರ 57ನೇ ಸೆಷನ್ ಕೋರ್ಟ್‌ನಲ್ಲಿ ನಡೆಯಿತು.
ಕಳೆದ ಶುಕ್ರವಾರ ಪವಿತ್ರ ಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ಇಂದಿಗೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿತ್ತು.
ಈಗ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನೂ ಮುಂದೂಡಲಾಗಿದ್ದು ದರ್ಶನ್ ಗೆ ಮತ್ತೆ ನಿರಾಸೆಯಾ ಗಿದೆ.