ಮೈಸೂರು: ಅಕ್ಟೋಬರ್ ಮೂರರಿಂದ 12ರವರೆಗೆ ನಡೆಯುವ ದಸರಾ ಮಹೋತ್ಸವಕ್ಕೆ ಭಾರೀ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಟ್ಕರ್ ಅವರು ತಿಳಿಸಿದ್ದಾರೆ.
ಒಂಬತ್ತು ದಿನಗಳ ಕಾಲ ನಡೆಯಲಿರುವ ನವರಾತ್ರಿ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ಬಿಗಿ ಭದ್ರತೆ ಕೈಗೊಳ್ಳಲಾಗಿದೆ, 27 ಎಸ್ಪಿ ಮಟ್ಟದ ಅಧಿಕಾರಿಗಳು, 989 ಅಡಿಷನಲ್ ಡಿವೈಎಸ್ಪಿ, ಇನ್ಸ್ಪೆಕ್ಟರ್ಗಳು, 3981 ಸಿಬ್ಬಂದಿ ಸೇರಿ ಈ ಬಾರಿ 5000ಕ್ಕೂ ಹೆಚ್ಚು ಮಂದಿ ಪೊಲೀಸರನ್ನು ದಸರಾ ವಿಶೇಷ ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಹೇಳಿದರು.
13,670 ಸಿಸಿ ಕ್ಯಾಮೆರಾ ಕಣ್ಗಾವಲನ್ನು ಮೈಸೂರಿನಾದ್ಯಂತ ಅಳವಡಿಸಲಾಗಿದೆ, ಪೊಲೀಸ್ ಸಹಾಯ ಕೇಂದ್ರಗಳನ್ನು ಪ್ರಮುಖ ಸ್ಥಳಗಳಲ್ಲಿ ತೆಗೆಯಲಾಗಿದೆ, ಪ್ರಮುಖ ಸ್ಥಳಗಳಲ್ಲಿ ವಾಚ್ ಟವರ್ ಗಳನ್ನು ಸಹ ಸ್ಥಾಪನೆ ಮಾಡಲಾಗಿದೆ ಎಂದು ಅವರು ತಿಳಿಸಿದರು.ಮಹಿಳೆಯರ ರಕ್ಷಣೆಗಾಗಿಯೇ ಚಾಮುಂಡಿ ಕಾರ್ಯ ಪಡೆಯನ್ನು ಸಹ ದಸರಾ ಸಂದರ್ಭದಲ್ಲಿ ಆಯೋಜಿಸಲಾಗಿದೆ ಎಂದು ಅವರು ಸೀಮಾ ಲಾಟ್ಕರ್ ವಿವರಿಸಿದರು.