ಸಿದ್ದು ಪರ ‌ಜಿ.ಟಿ.ಡಿ ಬ್ಯಾಟಿಂಗ್

ಮೈಸೂರು: ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ವೇಳೆ ಜೆಡಿಎಸ್ ಶಾಸಕ‌ ಜಿ.ಟಿ.ದೇವೇಗೌಡ ಅವರು‌ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಬೀಸುವ ಮೂಲಕ ದೋಸ್ತಿಗಳಿಗೆ ಟಾಂಗ್ ನೀಡಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ, ಜೆಡಿಎಸ್ ದೋಸ್ತಿ ನಾಯಕರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರೂ ಆಗಿರುವ ಜಿ.ಟಿ ದೇವೇಗೌಡ ನೇರ ಶಾಕ್ ಕೊಟ್ಟರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ರಾಜೀನಾಮೆ ಕೋಡೋದೆ ಆದರೆ ಎಫ್ಐಆರ್ ಆಗಿರೋ ಎಲ್ಲಾ ನಾಯಕರು ಕೊಡಲಿ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯೂ ಕೊಡಲಿ ಎಂದು ಹೇಳುವ ಮೂಲಕ ಸ್ವಪಕ್ಷದ ನಾಯಕ ಕುಮಾರಸ್ವಾಮಿಗೆ ಟಾಂಗ್ ನೀಡಿದರು.

ಎಲ್ಲಾ ಗಾಜಿನ ಮನೆಯಲ್ಲಿ ಕೂತಿದ್ದಾರೆ. ರಾಜೀನಾಮೆ ಕೊಡಿ,ರಾಜೀನಾಮೆ ಕೊಡಿ ಎಂದು ಒಂದೇ‌ ಸಮನೆ ಕೇಳುತ್ತಿದ್ದಾರಲ್ಲಾ  ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದೆಯಾ, ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡವಾ, ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ ಎಂದು ಕಾರವಾಗಿಯೇ ಪ್ರಶ್ನಿಸಿದರು.

136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ,ರಾಜೀನಾಮೆ ಕೊಡಿ ರಾಜೀನಾಮೆ ಕೊಡಿ ಅಂದರೆ ಕೊಡೋದಕ್ಕೆ ಸಾದ್ಯಾನಾ, ಒಂದು ಅತ್ಯಾಚಾರ, ಕೊಲೆ ಮೂರು ತಿಂಗಳು ಮಾಧ್ಯಮ ತೋರಿಸುತ್ತೆ, ಒಂದು ಎಫ್ ಐ ಆರ್ ನಾ ಎಷ್ಟು ದಿನ ತೋರಿಸುತ್ತಿರಾ, ಯಾರ ಯಾರ ಮೇಲೆ ಎಫ್ ಐ ಆರ್ ಆಗಿದೆ ಎಲ್ಲರೂ ರಾಜೀನಾಮೆ ಕೊಡಿ ಎಂದು ಜಿಟಿಡಿ ಸವಾಲು ಹಾಕಿದರು.

ಶಾಸಕ ಜಿ ಟಿ ದೇವೇಗೌಡ ಭಾಷಣಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಚಿವರು ಶಾಸಕರು ಫುಲ್ ಖುಷ್.

ಭಾಷಣ ಮುಗಿಸಿ ಬಂದ ಜಿ.ಟಿ ದೇವೇಗೌಡರಿಗೆ ಶಾಸಕರಾದ ರಮೇಶ್ ಬಂಡೀಸಿದ್ದೇಗೌಡ, ತನ್ವೀರ್ ಸೇಠ್‌ ಎದ್ದು ನಿಂತು ಗೌರವ ಸಲ್ಲಿಸಿದರೆ, ಸಚಿವ ಹೆಚ್. ಕೆ ಪಾಟೀಲ್, ವೆಂಕಟೇಶ್‌ ಹಸ್ತಲಾಘವ ಕೊಟ್ಟು ಅಭಿನಂದನೆ ಸಲ್ಲಿಸಿದ್ದು ವಿಶೇಷ.