ಮೈಸೂರು: ನಕಲಿ ಯುನಿವರ್ಸಿಟಿ ಹೆಸರಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುತ್ತಿದ್ದ ಕಾರ್ಯಕ್ರಮದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ನಕಲಿ ಯುನಿವರ್ಸಿಟಿ ಹೆಸರಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನಿಸುವ ದಂಧೆ ಕುರಿತು ದೊರೆತ ಮಾಹಿತಿ ಮೇರೆಗೆ ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ನೇತೃತ್ವದಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿದ್ದ ನಕಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಕಾರ್ಯಕ್ರಮದ ವೇಳೆ ದಾಳಿ ನಡೆಸಲಾಗಿದೆ.
ಪೊಲೀಸರ ದಾಳಿ ವೇಳೆ ಕೆಲ ಆಯೋಜಕರು ಪರಾರಿಯಾಗಿದ್ದಾರೆ. ಈ ವೇಳೆ ಮೂರು ಮಂದಿ ಆಯೋಜಕರನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ.
ನಕಲಿ ಗೌರವ ಡಾಕ್ಟರೇಟ್ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹರಿಹರ ಶಾಸಕ ರಾಮಪ್ಪ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಮಂದಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಮಿಳುನಾಡು ಮೂಲದ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯದ ಹೆಸರಲ್ಲಿ ನಕಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ.
ದಾಳಿ ವೇಳೆ ಪೊಲೀಸರು ಪ್ರಶಸ್ತಿ ಪತ್ರ, ಮೊಮೆಂಟೋಗಳನ್ನು ವಶಕ್ಕೆ ಪಡೆದಿದ್ದಾರೆ.
ವಿಜಯನಗರ ಪೆÇಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.