ದರ್ಶನ್‌ ಜಾಮೀನು ಅರ್ಜಿ ಭವಿಷ್ಯ ಅ.14 ರಂದು ಪ್ರಕಟ

ಬೆಂಗಳೂರು: ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ಭವಿಷ್ಯ ಅ.14 ರಂದು ಪ್ರಕಟವಾಗಲಿದೆ.

ಸುದೀರ್ಘ ವಿಚಾರಣೆ ನಡೆಸಿದ ಸೆಷನ್ಸ್‌ ಕೋರ್ಟ್‌ ನ್ಯಾಯಾಧೀಶರಾದ ಜೈಶಂಕರ್‌  ವಿಚಾರಣೆಯನ್ನು ಮುಕ್ತಾಯಗೊಳಿಸಿ ಅ.14 ರಂದು ಅದೇಶ ಪ್ರಕಟಿಸುವುದಾಗಿ ತಿಳಿಸಿದರು.

ಇಂದು ದರ್ಶನ್‌ ಪರ ಹಿರಿಯ ಕ್ರಿಮಿನಲ್‌ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರೆ ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದರು.

ಬುಧವಾರ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಕೋರ್ಟ್‌ ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಿತ್ತು.