ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೇಯ ಘಟನೆ ನಡೆದಿದೆ.
ಕಳೆದ ಮೂರು ವರ್ಷಗಳ ಹಿಂದೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣವೇ ನಗರದ ಜನರಲ್ಲಿ ಇನ್ನೂ ಮಾಸಿಲ್ಲ,ಈಗ ಮತ್ತೆ ಸಾಮೂಹಿಕ ಅತ್ಯಾಚಾರ ನಡೆದಿದೆ.
ಯುವತಿಯ ಮೇಲೆ ಆಕೆಯ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ಮಾಡಿದರೆಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಮಡಿಕೇರಿ ಮೂಲದ ಯುವತಿ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ
ಖುದ್ದು ಹಾಜರಾಗಿ ದೂರು ನೀಡಿದ್ದಾಳೆ.
ಮಡಿಕೇರಿಯಿಂದ ಬಂದ ಯುವತಿ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಳು. ಈ ವೇಳೆ ಜೊತೆಗೆ ಇದ್ದ ಸ್ನೇಹಿತರೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.