ಜಮೀರ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಡಿಕೆಶಿ

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿಗೆ ಕರಿಯ ಎಂದ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಉಲ್ಟಾ ಹೊಡೆದು ವಿರೋಧ ವ್ಯಕ್ತಪಡಿಸಿದ್ದಾರೆ.

ಜಮೀರ್ ಹೇಳಿದ್ದು ಸರಿಯಲ್ಲ,ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅದನ್ನು ಖಂಡಿಸುತ್ತೇನೆ ಎಂದು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ನಾನು ಜಮೀರ್ ಹೇಳಿಕೆಯನ್ನ ಒಪ್ಪುವುದಿಲ್ಲ, ಅದನ್ನ ನಾನು ಖಂಡಿಸ್ತೇನೆ ಎಂದರು.

ಇದೇ ಡಿ.ಕೆ.ಶಿವಕುಮಾರ್ ಮೊನ್ನೆ ಜಮೀರ್ ಹಾಗೂ ಕುಮಾರಸ್ವಾಮಿ ಅವರು ಸ್ನೇಹರಾದವರು ಅವರಿಬ್ಬರು ಏನೇನು ಕರೆದುಕೊಳ್ತಾ ಇದ್ದರೊ ಅಂದಿದ್ದರು,ಆದರೆ ಜಮೀರ್ ಹೇಳಿಕೇನಾ ವಿರೋಧಿಸಿರಲಿಲ್ಲ.

ಈಗ ಜಮೀರ್ ಅವರು ಏನುಬೇಕಾದ್ರೂ ಕರೆದುಕೊಳ್ಳಲಿ. ಕರಿಯ ಅಂತಾದ್ರೂ ಅನ್ನಲಿ, ಕೊಚ್ಚೆ ಅಂತನಾದ್ರೂ ಕರೆಯಲಿ. ನಾನು ಪಕ್ಷದ ಅಧ್ಯಕ್ಷನಾಗಿ ಹೇಳ್ತೇನೆ. ನಾನು ಆನ್ ರೆಕಾರ್ಡ್ ಹೇಳ್ತೇನೆ ಜಮೀರ್ ಹೇಳಿದ್ದು ಸರಿಯಲ್ಲ ಎಂದು ಹೇಳಿದರು.

ಕಪ್ಪು ಬಿಳುಪು ಅಂತ ಕರೆಯೋದು ಸರಿಯಲ್ಲ ಎಂದು ಡಿಕೆಶಿಗೆ ಜಮೀರ್ ವಿರುದ್ಧ ಕ್ರಮ ತೆಗೆದುಕೊಳ್ಳುವಿರಾ ಎಂಬ ಪ್ರಶ್ನೆಗೆ, ಅದನ್ನ ಇಲ್ಲಿ ಬಹಿರಂಗವಾಗಿ ಅದನ್ನೆಲ್ಲ ಮಾತಾಡಕ್ಕಾಗೋದಿಲ್ಲ ಎಂದು ತಿಳಿಸಿದರು.

ಜಮೀರ್ ವಿರುದ್ಧ ಶಿಸ್ತು ಕ್ರಮ ಇದೆಯೆ ಎಂದುದಕ್ಕೆ ಜಮೀರ್ ಅವರದ್ದು ಪರ್ಸನಲ್ ವಿಚಾರ. ಅವರು ಮಾತನಾಡಬಾರದಿತ್ತು. ಕಪ್ಪು ಬಿಳುಪು ಅದೆಲ್ಲಾ ಬೇಡ. ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಪ್ರೀತಿಯಿಂದ ಮಾತಾಡಿದ್ರೋ ಸಲುಗೆಯಿಂದ ಮಾತನಾಡಿದ್ದಾರೋ ತಪ್ಪು ತಪ್ಪೇ. ಜಮೀರ್ ಅವರಿಗೆ ಆಂತರಿಕವಾಗಿ ಹೇಳಿದ್ದೇವೆ. ಅವರು ಕ್ಷಮೆ ಕೂಡ ಕೇಳಿದ್ದಾರೆ. ನಾವು ಆ ಹಂತಕ್ಕೆ ಹೋಗಬಾರದು ಅಷ್ಟೇ. ಅವರಿಬ್ಬರು ಏನು ಅಂತ ಗೊತ್ತಿಲ್ಲ. ಅದು ಜನ ತೀರ್ಮಾನ ಮಾಡಲಿ. ನಾನು ಹೇಳೋದು ಜಮೀರ್ ಹೇಳಿದ್ದು ರಾಂಗ್, ನಾವು ಅವರನ್ನ ತಿದ್ದುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ವಕ್ಫ್ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಸಿದ್ಧತೆ ಬಗ್ಗೆ ಪ್ರತಿಕ್ರಿಯಿಸಿ, ಅದು ಬಿಜೆಪಿಯವರ ಮೂರ್ಖತನ. ಅವರ ಕಾಲದಲ್ಲೇ ಪಹಣಿಗಳು ಬರ್ತಿವೆ. ಅದನ್ನ ನಮ್ಮವರು ನೋಡಿಲ್ಲ. ಈಗ ಅದರ ಬಗ್ಗೆ ಮಾತನಾಡ್ತಿ ದ್ದಾರೆ. ನಾವು ಮಾತಾಡಿದ್ರೆ ನೀವು ಕವರ್ ಮಾಡಲ್ಲ, ಅವರು ಮಾತನಾಡಿದ್ರೆ ಕವರ್ ಮಾಡ್ತೀರ ಎಂದು ಮಾಧ್ಯಮದವರಿಗೆ ಡಿಕೆಶಿ ಟಾಂಗ್ ಕೊಟ್ಟರು.

ಹಿಂದೆ ಅವರು ಖರೀದಿ ಮಾಡಿದ್ದು ಏನು, ಕುರಿಗಳನ್ನೇ ತಾನೇ ಅವರು ಖರೀದಿ ಮಾಡಿದ್ದು. ಅಶ್ವಥನಾರಾ ಯಣ್, ಶ್ರೀನಿವಾಸಗೌಡ ಮನೆಗೆ ಹಣ ತೆಗೆದು ಕೊಂಡು ಹೋಗಿರಲಿಲ್ವ, ಸದನದಲ್ಲೇ ಇದರ ಬಗ್ಗೆ ಚರ್ಚೆ ಆಗಲಿಲ್ವೇ, ಮೊದಲು ಸಾವಿರ ಕೋಟಿ ಕಲೆಕ್ಟ್ ಮಾಡಿದ್ಯಾರು, ಮೊದಲು ಅಲ್ಲಿಂದ ಶುರುಮಾಡಿ, ಸಿಎಂ ಹೇಳಿದ ನಂತರ ಇದೆಲ್ಲ ಶುರುವಾಗಿದೆ ಎಂದು ಶಾಸಕರ ಆಪರೇಷನ್ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದರು.