ನವದೆಹಲಿ: ಕೃಷಿ ಸಂಬಂಧಿತ 3 ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.
ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅಂಗೀಕಾರಗೊಂಡಿದ್ದ ಕೃಷಿ ಸಂಬಂಧಿತ 3 ಮಸೂದೆಗಳನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು.
ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ 2020 ಮತ್ತು ರೈತರು ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಹಾಗೂ ರೈತರಿಗೆ ಗುತ್ತಿಗೆ ಕೃಷಿಗೆ ಪ್ರವೇಶಿಸಲು ಒದಗಿಸುವ ಮಸೂದೆಯನ್ನು ಅಂಗೀಕರಿಸಲಾಗಿತ್ತು.
ವಿಪಕ್ಷಗಳ ವಿರೋಧದ ನಡುವೆಯೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೃಷಿ ಸಂಬಂಧಿತ ಮೂರು ಮಸೂದೆಗಳಿಗೆ ಸಹಿ ಹಾಕಿದ್ದಾರೆ.