ಮೈಸೂರು: ಬಿಜೆಪಿಯವರು ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಗಂಭೀರ ಆರೋಪ ಮಾಡಿದರು.
ಮೈಸೂರಿನಲ್ಲಿ ಸ್ವಾಭಿಮಾನಿರತಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರಲು ಬಿಜೆಪಿ ಯತ್ನಿಸುತ್ತಿದೆ, ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡುವುದಿಲ್ಲ ಎಂದು ತಂದೆಯ ಪರ ಬ್ಯಾಟಿಂಗ್ ಬೀಸಿದರು.
ಬಿಜೆಪಿಯವರು ಪ್ರಜಾಪ್ರಭುತ್ವ ಕೊಲ್ಲುವ ಯತ್ನ ಮಾಡುತ್ತಿದ್ದಾರೆ,ಅವರ ಮೇನ್ ಟಾರ್ಗೆಟ್ ಅಧಿಕಾರಕ್ಕೆ ಬರವುದು ಎಂದು ಟೀಕಿಸಿದರು.
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ಕೊಡಲು ಕಾರಣ ಇರಬೇಕು. ಸಿಎಂ ತಪ್ಪು ಮಾಡದೆ ಇದ್ದರೂ ತನಿಖಾ ಸಂಸ್ಥೆಯನ್ನ ಬಳಸಿಕೊಂಡು ರಾಜೀನಾಮೆಗೆ ಯತ್ನಿಸುತ್ತಿದ್ದಾರೆ ಎಂದು ದೂರಿದರು.
ಜನರು ಉಪಚುನಾವಣೆಯಲ್ಲಿ ನಮಗೆ ಬೆಂಬಲ ಸೂಚಿಸಿದ್ದಾರೆ,ಇದರಿಂದ ನಮಗೆ ನೈತಿಕ ಸ್ಥೈರ್ಯ ಸಿಕ್ಕಿದೆ. ಹಾಗಾಗಿ ರಾಜೀನಾಮೆ ಕೊಡುವ ಪ್ರಮೇಯ ಇಲ್ಲ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ನನಗೆ ಗೊತ್ತಿಲ್ಲ.ಅದರ ಬಗ್ಗೆ ಮಾತನಾಡಲು ನನಗೆ ಅರ್ಹತೆ ಇಲ್ಲ. ಆ ಬಗ್ಗೆ ಹೈ ಕಮಾಂಡ್ ತೀರ್ಮಾನ ಮಾಡುತ್ತದೆ ಯತೀಂದ್ರ ತಿಳಿಸಿದರು.
ಹಾಸನ ಸಮಾವೇಶ ಬಗ್ಗೆ ಎಐಸಿಸಿಗೆ ಪತ್ರ ಬರೆದ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಸಮಾವೇಶಕ್ಕೆ ಹೈಕಮಾಂಡ್ ಒಪ್ಪಿಗೆ ಇದೆ. ಪತ್ರದ ಬಗ್ಗೆ ನನಗೆ ಗೊತ್ತಿಲ್ಲ,ಆ ಪತ್ರ ಫೇಕ್ ಇರಬಹುದು ಎಂದು ತಿಳಿಸಿದರು.
ಈಗಾಗಲೇ ಮೈಸೂರಿನಲ್ಲಿ ಮುಡಾ ವಿಚಾರಕ್ಕೆ ಸಮಾವೇಶ ಮಾಡಲಾಗಿದೆ.ಈಗ ಹಾಸನದಲ್ಲಿ ಭಾರಿ ಸಮಾವೇಶ ಮಾಡುತ್ತಿದ್ದೇವೆ ಅಷ್ಟೇ. ಇಡಿ ತನಿಖೆಯಲ್ಲಿ ತಂದೆಯ ಆರೋಪದ ಮೇಲಿನ ವಿಚಾರಣೆ ನಡೆಯುತ್ತಿಲ್ಲ. ಇಡಿಗೆ ವಿಚಾರಣೆ ಮಾಡುವ ಹಕ್ಕು ಇಲ್ಲ. ಇದರಲ್ಲಿ ಸತ್ಯ ಏನು ಅಂಥ ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.
ಆರ್ ಟಿಐ ಕಾರ್ಯಕರ್ತ ಮಾಡಿರುವ ಆರೋಪದಲ್ಲಿ ಸತ್ಯ ಇಲ್ಲ. ಪ್ರತಿಪಕ್ಷಗಳು ನಮ್ಮ ನೈತಿಕತೆ ಕುಗ್ಗಿಸಲು ಯತ್ನಿಸುತ್ತಿವೆ ಅಧಿಕಾರದ ಹಪಹಪಿಯಿಂದ ಏನು ಬೇಕಾದರೂ ಮಾಡುತ್ತಾರೆ. ನಮಗೆ ಕೇಂದ್ರ ತನಿಖಾ ಸಂಸ್ಥೆಯ ಮೇಲೆ ನಂಬಿಕೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಡಾ.ಯತೀಂದ್ರ ತಿಳಿಸಿದರು.