ಮುಡಾ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ ದೀಪಾ ಚೋಳನ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ ಇಡಿ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಕರಣ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಡಾ ದಾಖಲೆ ತಿದ್ದಿದ ಆರೋಪದ ಮೇಲೆ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ದಾಖಲೆಗಳ ಸಮೇತ ದೀಪಾ ಚೋಳನ್ ಹಾಜರಾಗಿ ವಿಚಾರಣೆ ಎದುರಿಸಿದರು.