ಬುಧವಾರ‌ ಸೋಮನಹಳ್ಳಿಯಲ್ಲಿ ಕೃಷ್ಣ ಅಂತ್ಯಕ್ರಿಯೆ

ಬೆಂಗಳೂರು: ಮಾಜಿ ಮುಖ್ಯ ಮಂತ್ರಿ ಎಸ್‌ಎಂ ಕೃಷ್ಣ ಅವರ ಅಂತ್ಯಕ್ರಿಯೆಯ ಬುಧವಾರ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ.

ನಾಳೆ ಬೆಳಗ್ಗೆ ಬೆಂಗಳೂರಿನಿಂದ ಪಾರ್ಥಿವ ಶರೀರವನ್ನು ಸೋಮನಹಳ್ಳಿಗೆ ತರಲಾಗುತ್ತದೆ.ಅಲ್ಲಿನ ಶಾಲೆಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ  ಇಡಲಾಗುತ್ತದೆ, ಮಧ್ಯಾಹ್ನದ ನಂತರ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಂತಾಪ: ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ,ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ,ಮುಖ್ಯ ಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್,ಸ್ಪೀಕರ್ ಯು.ಟಿ.ಖಾದರ್,ಸಭಾಪತಿ ಬಸವರಾಜ ಹೊರಟ್ಟಿ, ‌ರಾಜ್ಯದ ಸಚಿವರು,ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರು,

ಕೇಂದ್ರ ಸಚಿವರುಗಳಾದ ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ ಜೋಶಿ,ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.