ಬೆಂಗಳೂರು: ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಿದೆ.
ಬುಧವಾರ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದ್ದು,ಅವರ ಗೌರವಾರ್ಥ ಡಿಸೆಂಬರ್ 11ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದೆ.
ಸರ್ಕಾರಿ ರಜೆ ಹಿನ್ನೆಲೆ ಸರ್ಕಾರಿ ಮತ್ತು ಖಾಸಗಿ ಶಾಲಾ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ.