ಕರ್ನಾಟಕಕ್ಕೆ ರಾಜ್ಯ ಸರ್ಕಾರ ಮಾರಿ:ಅಶೋಕ್ ಟೀಕೆ

ಬೆಂಗಳೂರು: ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿದ್ದರಾಮಯ್ಯ ನವರ ಸರ್ಕಾರ, ಹೈಕಮಾಂಡ್ ನಾಯಕರ ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ಪ್ರತಿಪಕ್ಷದ ನಾಯಕ ಅಶೋಕಾ‌ ದೂರಿದ್ದಾರೆ.

ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತತರಿಗೆ ಪರಿಹಾರ ಕೊಡಲು ಇವರಿಗೆ ಹಣವಿಲ್ಲ,ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಯಿಂದ ಸಾವನ್ನಪ್ಪಿರುವ ಬಾಣಂತಿಯರ ಕುಟುಂಬಗಳಿಗೆ ಪರಿಹಾರ ಕೊಟ್ಟಿಲ್ಲ. ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ರಸ್ತೆಗುಂಡಿ ಮುಚ್ಚಲು ಹಣವಿಲ್ಲ,ಆದರೆ ಹೈಕಮಾಂಡ್ ನಾಯಕರನ್ನು ಓಲೈಸಲು ಕೇರಳದಲ್ಲಿ ಮನೆ ನಿರ್ಮಿಸಿಕೊಡಲು ಹೊರಟಿದೆ ಈ ನಾಡದ್ರೋಹಿ ಕರ್ನಾಟಕ ಸರ್ಕಾರ ಎಂದು ಟ್ವೀಟ್ ಮಾಡಿ ಅಶೋಕ್ ಟೀಕಿಸಿದ್ದಾರೆ.