ಲಾಠಿ ಚಾರ್ಜ್: ಪೊಲೀಸರ ನಡೆ ಸಮರ್ಥಿಸಿಕೊಂಡ ಪರಮೇಶ್ವರ್

ಬೆಂಗಳೂರು: ಪಂಚಮಸಾಲಿ ಪ್ರತಿಭಟನೆ ವೇಳೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್‌ ತಿಳಿಸಿದರು.

ಪ್ರತಿಭಟನೆ ವೇಳೆ ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆದ್ದರಿಂದ, ಲಾಠಿ ಚಾರ್ಜ್ ಮಾಡುವ ಅನಿವಾರ್ಯ ವಾಯಿತು ಎಂದು ಪರಮೇಶ್ವರ್‌ ಪೊಲೀಸರ ನಡೆಯನ್ನು ಸಮರ್ಥಿಸಿ ಕೊಂಡರು.

2ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪಂಚಮಸಾಲಿಗಳ ಪ್ರತಿಭಟನೆ ವೇಳೆ ಲಾಠಿ ಚಾರ್ಜ್‌ ನಡೆದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್,ಪಂಚಮಸಾಲಿ ಪ್ರತಿಭಟನೆ ಅವರ ಹಕ್ಕು,ಆದರೆ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಿದರು.

5 ಸಾವಿರ ಟ್ರ್ಯಾಕ್ಟರ್‌ಗಳನ್ನು ತೆಗೆದುಕೊಂಡು ಮುತ್ತಿಗೆ ಹಾಕಲು ಮುಂದಾಗಿದ್ದರು, ಸಿಎಂ ಜೊತೆ ಮಾತುಕತೆಗೆ ಸ್ವಾಮೀಜಿ ಬರಲಿಲ್ಲ, ಮುಖ್ಯರಸ್ತೆಗೆ ಪ್ರತಿಭಟನಾಕಾ ರರು ಬಂದರು. ಕಾನೂನು ಉಲ್ಲಂಘನೆ ಮಾಡಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೋದಾಗ ಲಘು ಲಾಠಿ ಪ್ರಹಾರ ನಡೆದಿದೆ. ಸ್ವಾಮೀಜಿ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ, ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ ಆದ್ದರಿಂದ, ಲಾಠಿ ಚಾರ್ಜ್ ಮಾಡುವ ಅನಿವಾರ್ಯ ಇತ್ತು ಎಂದು ಸ್ಪಷ್ಟಪಡಿಸಿ ದರು.

ಗೋಲಿಬಾರ್ ಮಾಡುವ ಪ್ಲ್ಯಾನ್‌ ಇತ್ತು ಎಂಬ ಸ್ವಾಮೀಜಿ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ, ಆ ರೀತಿ ಏನೂ ಇಲ್ಲ, ಪೊಲೀಸರು ಯಾರ ಮೇಲೂ ದುರುದ್ದೇಶಪೂರಿತವಾಗಿ ಲಾಠಿ ಪ್ರಹಾರ ನಡೆಸಿಲ್ಲ ಎಂದು ಪರಮೇಶ್ವರ್ ತಿಳಿಸಿದರು.