87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿದ್ಯುಕ್ತ ಚಾಲನೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿದ್ಯುಕ್ತ ಚಾಲನೆ‌ ದೊರೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದರು.

ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆ ಎಂದೇ ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದು ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿ ರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದು ಈ ವೇಳೆ ಸಿದ್ದರಾಮಯ್ಯ ನುಡಿದರು.

ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು.

ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಸಚಿವರಾದ ಚೆಲುವರಾಯಸ್ವಾಮಿ,ಡಾ ಹೆ.ಚ್.ಸಿ.ಮಹದೇವಪ್ಪ, ಮುನಿಯಪ್ಪ, ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌.ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂದಿದೆ.

ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯರು, ಮಹಿಳೆ ಯರು, ವಿದ್ಯಾ ರ್ಥಿಗಳು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ್ಯಂತ ಎಲ್ಲಾ ಜಿಲ್ಲೆಗಳಿಂದ ಕನ್ನಡಾಭಿಮಾನಿ ಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ನಗರಕ್ಕೆ ಆಗಮಿಸಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿ ದ್ದುದು ಕಂಡುಬಂದಿತು.

ಜನಸಾಗರ ಸೇರಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಂದೋಬಸ್ತ್ ಮಾಡಿದೆ. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮಂಡ್ಯ ನಗರದಲ್ಲಿ ನಗರ ಸಾರಿಗೆ ಬಸ್ ಉಚಿತವಾಗಿ ಬಿಟ್ಟಿರುವುದರಿಂದ ನಗರದ ಜನತೆ ಅತಿ‌ ಹೆಚ್ಚಿನ ಸಂಖ್ಯೆಯಲ್ಲಿ ಭಾಗವ ಹಿಸಿದ್ದಾರೆ.

ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರುವುದರಿಂದ ನಗರ ಹಾಗೂ ಜಿಲ್ಲೆಯ ಶಾಲಾ, ಕಾಲೇಜು ವಿದ್ಯಾರ್ಥಿ ಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನ ದಲ್ಲಿ ಭಾಗವಹಿಸಿದ್ದಾರೆ.