ಮೈಸೂರು: ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಹೇಯ ಘಟನೆ ಮೈಸೂರು ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ.
ಬೆಲವತ್ತ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹನುಮಂತು (57) ಕೊಲೆಯಾದ ವ್ಯಕ್ತಿ.
ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ದ್ವೇಷ ದಿಂದ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಹನುಮಂತು ನೆನ್ನೆ ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಂತಕರು ದಾಳಿ ಮಾಡಿ ಕೊಲೆ ಮಾಡಿದ್ದಾರೆ.
ರಿಯಲ್ ಎಸ್ಟೇಟ್ ವೃತ್ತಿ ನಡೆಸುತ್ತಿದ್ದ ಹನುಮಂತು ತಮ್ಮ ಜಮೀನು ಮಾರಾಟ ಸಂಬಂಧ ಕೆಲವರೊಂದಿಗೆ ವೈಮನಸ್ಯ ಹೊಂದಿದ್ದರೆಂದು ತಿಳಿದುಬಂದಿದೆ.
ಮೇಟಗಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.