ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಕೋವಿಡ್-19 ಅವಲೋಕನ ಸಭೆ

ಮೈಸೂರು, ಸೆ. 29- ಮೈಸೂರಿನಲ್ಲಿ ಕೋವಿಡ್-19 ಸಮಸ್ಯೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಎಸ್.ಎ.ರಾಮದಾಸ್ ರವರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಹಾಗೂ ಪಾಲಿಕೆ ಆರೋಗ್ಯಾ ಇಲಾಖೆ ಅಧಿಕಾರಿಗಳೊಂದಿಗೆ ಕೋವಿಡ್ -19 ಅವಲೋಕನ ಸಭೆ ನಡೆಸಲಾಯಿತು.
ಮೈಸೂರಿನಲ್ಲಿ ಕೋವಿಡ್-19 ಸಮಸ್ಯೆಗಳು ಉಲ್ಬಣವಾಗಿದ್ದು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ನ ಅವಶ್ಯಕತೆ ಹೆಚ್ಚಿದ್ದು ವಿವಿಧ ಕ್ಷೇತ್ರಗಳ ಉದ್ಯಮಿಗಳಿಗೆ, ಕೆಲಸಗಾರರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಕರೆಸಿ ಈ ಬಗ್ಗೆ ಮಾಹಿತಿ ಪಡೆದು ಸರ್ಕಾರದ ಗಮನಕ್ಕೆ ತರುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಪ್ರತ್ಯೇಕವಾಗಿ ಶಾಸಕ ಎಸ್.ಎ.ರಾಮದಾಸ್ ಸಭೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಕೋವಿಡ್- 19 ಸಮಸ್ಯೆ ಹೆಚ್ಚಾಗಿರುವ ಕಾರಣ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲವೆಂದು ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೈಸೂರಿನಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಇದನ್ನು ತಡೆಗಟ್ಟಲು ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳ ಶೇ. 50ರಷ್ಟು ಬೆಡ್ ಗಳನ್ನು ಜಿಲ್ಲಾಡಳಿತಕ್ಕೆ ವಹಿಸಿರಿವಂತೆ ಮೈಸೂರಿನಲ್ಲಿ ಇದೇ ರೀತಿ ಕಾರ್ಯರೂಪಕ್ಕೆ ಬರುವಂತೆ ಮುಖ್ಯಮಂತ್ರಿಗಳ ಬಳಿ ಮಾತನಾಡಲಾಗುವುದು ಎಂದು ರಾಮದಾಸ್ ತಿಳಿಸಿದರು.
ಹೋಮ್ ಐಸೋಲೇಷನ್ ನಲ್ಲಿ ಇರುವ ಸೋಂಕಿತರು ಹೊರಗಡೆ ಒಡಾಡುತಿದ್ದು ಇದರಿಂದ ಬೇರೆ ಅವರಿಗೂ ತೊಂದರೆಯಾಗುತಿದ್ದು ಇಂತಹ ಪ್ರಕರಣ ಕಂಡು ಬಂದಲ್ಲಿ ತ್ವರಿತವಾಗಿ ಇಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೆÇಲೀಸ್ ಅಧಿಕಾರಿಗಳಿಗೆ ತಿಳಿಸಲಾಯಿತು ಎಂದು ಅವರು ತಿಳಿಸಿದರು.