ಒಳ್ಳೆಯ ಕೆಲಸ ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ- ಸಿದ್ದರಾಮಯ್ಯ

ಬೆಳಗಾವಿ: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಸಲು ತೆರಳುವ ವೇಳೆ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.

ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡುವ ಬಗ್ಗೆ ಬಿಜೆಪಿ ವಿರೋಧ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಟೀಕಿಸಿದರು.ಆದರೆ ಬಿಜೆಪಿಯ  ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಸಮರ್ಥಿಸಿದ್ದಾರೆ ಎಂದು ಹೇಳಿದರು.