ಬೆಂಕಿ ಹತ್ತಿ ಸುಟ್ಟು ಕರಕಲಾದ ಕಾರು

ಮೈಸೂರು: ನಿಂತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾದ ಘಟನೆ ಮೈಸೂರಿನ ವಿವಿ ಮೊಹಲ್ಲಾದಲ್ಲಿ ನಡೆದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ,ಆದರೂ ಕಾರು ಸಂಪೂರ್ಣ ಸುಟ್ಟು ಕರುಕಲಾಗಿದೆ.

ಕಾರಿನಲ್ಲಿ ಬಂದಿದ್ದವರು ರಸ್ತೆ ಬದಿ ಕಾರು ನಿಲ್ಲಿಸಿ ಹೋಟೆಲ್ ಗೆ ತೆರಳಿದ್ದರು.ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಅಗ್ನಿಶಾಮಕ ಠಾಣೆಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾದರು.ಆದರೂ‌ ಕಾರು ಸಂಪೂರ್ಣ ಸುಟ್ಟುಹೋಗಿದೆ.

ವಿವಿಪುರಂ ಪೊಲೀಸರು ಪ್ರಕರಣ ದಾಖಲಿಸಿ ದ್ದಾರೆ.