ನಿಮ್ಹಾನ್ಸ್ ದೇಶದ ಪ್ರಮುಖ ಸಂಸ್ಥೆಯಾಗಿ ಛಾಪು ಮೂಡಿಸಿದೆ:ಸಿದ್ದರಾಮಯ್ಯ

ಬೆಂಗಳೂರು: ನಿಮ್ಹಾನ್ಸ್ ಕಳೆದ ಐದು ದಶಕಗಳ ಅವಧಿಯಲ್ಲಿ ದೇಶದ ಮಾನಸಿಕ ಆರೋಗ್ಯ ಹಾಗೂ ನರರೋಗಗಳ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡುತ್ತಾ ದೇಶದ ಪ್ರಮುಖ ಸಂಸ್ಥೆಯಾಗಿ ಛಾಪು ಮೂಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿ ದರು.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ವತಿಯಿಂದ ಆಯೋಜಿಸಿದ್ದ
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ಮಹತ್ವವನ್ನು ಹೊಂದಿರುವ ಈ ಸಂಸ್ಥೆಯು ತನ್ನ ಐದು ದಶಕದ ಪಯಣದಲ್ಲಿ ಆರೈಕೆ, ಸಂಶೋಧನೆ ಮತ್ತು ಶಿಕ್ಷಣ ವಲಯದಲ್ಲಿ ವಿಶ್ವದ ಗಮನ ಸೆಳೆದಿದೆ. ಮಾನಸಿಕ ಆರೋಗ್ಯ ಕುರಿತಾದ ನೀತಿ ನಿರೂಪಣೆ ಯಲ್ಲಿ ನಿಮ್ಹಾನ್ಸ್ ಕೊಡುಗೆಯನ್ನು ಜಾಗತಿಕವಾಗಿ ಗುರುತಿಸಲಾಗಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಪಾರ್ಶ್ವವಾಯು, ತೀವ್ರತರ ಮೆದುಳು ಕಾಯಿಲೆಗಳು ಮತ್ತು ನರರೋಗ ಚಿಕಿತ್ಸೆಯಲ್ಲಿ ಅತ್ಯುತ್ತಮ ಗುಣ ಮಟ್ಟವನ್ನು ಸಾಧಿಸುವ ಮೂಲಕ ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘ ನೀಯ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದಾದ್ಯಂತ ಮಾನಸಿಕ ಆರೋಗ್ಯ ಸೇವೆಯನ್ನು ಕಲ್ಪಿಸಲು ಸರ್ಕಾರ ನಿಮ್ಹಾನ್ಸ್ನೊಂದಿಗೆ ಜೊತೆಗೂಡಿ ಕಾರ್ಯನಿರ್ವಹಿಸುತ್ತಿದೆ,ನಮ್ಮ ಸರ್ಕಾರ ಮಾನಸಿಕ ಆರೋಗ್ಯ ಸೇವೆಯನ್ನು ಒದಗಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಆತ್ಮಹತ್ಯೆ ತಡೆ, ದುಶ್ಚಟ ಹೊಂದಿದವರ ಪುನರ್ವಸತಿ ಮತ್ತು ಸಮು ದಾಯ ಮಾನಸಿಕ ಆರೋಗ್ಯ ಕಾರ್ಯಕ್ರಮಗಳಿಗೆ ಒತ್ತು ನೀಡಿದೆ, ಟೆಲಿ ಮಾನಸ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾ ಗಿದ್ದು, ರಾಜ್ಯದಲ್ಲಿ ಮಾನಸಿಕ ಆರೋಗ್ಯ ದ ಬೆಂಬಲ ಅಗತ್ಯವಿರುವ ಸುಮಾರು 17 ಲಕ್ಷ ಜನರು ಇದರ ಪ್ರಯೋಜನ ಪಡೆದಿದ್ದಾರೆ.

ರಾಜ್ಯ ಸರ್ಕಾರ ನೀತಿ ಆಯೋಗ, ನಿಮ್ಹಾನ್ಸ್ ಸಹಯೋಗದಲ್ಲಿ ಆರಂಭಿಸಿರುವ ಕರ್ನಾಟಕ ಬ್ರೈನ್ ಹೆಲ್ತ್ ಇನೀಷಿಯೇಟಿವ್, ನರರೋಗ ಆರೈಕೆಯಲ್ಲಿ ತಜ್ಞರ ಸೇವೆಯನ್ನು ಜಿಲ್ಲಾಮಟ್ಟದಲ್ಲಿಯೂ ಲಭ್ಯ ವಾಗಿಸಿದೆ. ತೀವ್ರತರ ಪಾರ್ಶ್ವವಾಯು ಮತ್ತು ನರರೋಗ ಆಘಾತ ಆರೈಕೆಯಲ್ಲಿ ತರಬೇತಿ ಮತ್ತು ನಾವೀನ್ಯತಾ ಮಾದರಿಗಳನ್ನು ಈ ಯೋಜನೆ ಸಾಧ್ಯವಾಗಿಸಿದೆ.

ಜಿಲ್ಲಾ ಉಪಕೇಂದ್ರ ಆಸ್ಪತ್ರೆಗಳಲ್ಲಿ ಮನೋಚೈತನ್ಯ ಮಾನಸಿಕ ಆರೋಗ್ಯ ಚಿಕಿತ್ಸಾ ಕಾರ್ಯಕ್ರಮಗಳ ಮೂಲಕ 146 ತಾಲ್ಲೂಕುಗಳ ಐದು ಲಕ್ಷ ಜನರಿಗೆ ಉಪಯೋಗವಾಗಿದೆ. ಅಲ್ಲದೇ, ಆರ್.ಸಿ.ಎಚ್, ಆರ್‌ಬಿಎಸ್‌ಕೆ ಮತ್ತು ಆರ್‌ಕೆಎಸ್‌ಕೆ ಸಹಭಾಗಿತ್ವ ದೊಂದಿಗೆ ತಾಯಿ, ಮಗು ಮತ್ತು ಕಿಶೋರ ಮಾನಸಿಕ ಆರೋಗ್ಯ ಸೇವೆಗಳ ಪೂರೈಸಲು ಕ್ರಮವಹಿಸ ಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ಮೈಲಿಗಲ್ಲು ಸಾಧನೆಗೆ ಕಾರಣರಾಗಿರುವ ನಿಮ್ಹಾನ್ಸ್ನ ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೆ ನನ್ನ ಅಭಿ ನಂದನೆಗಳು,‌‌ ನಿಮ್ಮ ಸಮರ್ಪಣೆಯ ಸೇವೆ ಮಾನಸಿಕ ಆರೋಗ್ಯ ವಿಶ್ವದೆಲ್ಲೆಡೆ ಲಭಿಸಲು ಹಾಗೂ ಪ್ರತಿ ಯೊಬ್ಬರ ಆರೋಗ್ಯಕರ ಜೀವನದ ಅವಕಾಶ ಕಲ್ಪಿಸುವ ಭವಿಷ್ಯ ನಿರ್ಮಾಣಕ್ಕೆ ಪ್ರೇರಣೆ ನೀಡಿದೆ ಎಂದು ಸಿಎಂ‌ ಬಣ್ಣಿಸಿದರು.