ದೆಹಲಿ ವಿಧಾನಸಭೆಗೆ ಫೆ.5ಕ್ಕೆ ಚುನಾವಣೆ

ನವದೆಹಲಿ: ರಾಷ್ಟ್ರರಾಜ್ಯಧಾನಿ ದೆಹಲಿ ವಿಧಾನಸಭೆಗೆ ಮುಹೂರ್ತ ಫಿಕ್ಸ್ ಆಗಿದೆ. ಫೆ.5 ರಂದು ಚುನಾವಣೆ ನಡೆಯಲಿದೆ.

ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ಫೆ.8 ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

70 ಸದಸ್ಯ ಬಲದ ದಿಲ್ಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದೆ.

ಆಮ್ ಆದ್ಮಿ ಪಕ್ಷ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅರವಿಂದ್​ ಕೇಜ್ರಿವಾಲ್​​ ಚುನಾವಣೆ ಗೆದ್ದು ಮತ್ತೆ ಸಿಎಂ ಹುದ್ದೆಗೇರುವ ತವಕದಲ್ಲಿದ್ದಾರೆ. ಅರವಿಂದ್ ಕೇಜ್ರಿವಾಲ್  ನವದೆಹಲಿ ಕ್ಷೇತ್ರದಿಂದ ಹಾಗೂ ಹಾಲಿ ಸಿಎಂ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಬಿಜೆಪಿ 29 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎಎಪಿ ತೊರೆದು ಬಿಜೆಪಿ ಸೇರಿದ್ದ ಕೈಲಾಶ್​ ಗೆಹ್ಲೋಟ್​ ಬಿಜವಸನ್​ನಿಂದ ಸ್ಪರ್ಧಿಸಲಿದ್ದಾರೆ. ಪಟೇಲ್​ ನಗರದಿಂದ ರಾಜ್​ ಕುಮಾರ್, ದೆಹಲಿಯ ಮಾಜಿ ಕಾಂಗ್ರೆಸ್​ ಮುಖ್ಯಸ್ಥ ಅರವಿಂದ್​ ಸಿಂಗ್​ ಲವ್ಲಿ ಗಾಂಧಿ ನಗರದಿಂದ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್​ 48 ಅಭ್ಯರ್ಥಿಗಳನ್ನು ಘೋಷಿಸಿದ್ದು, ಮತ್ತೊಂದು ಪಟ್ಟಿ ಹೊರಬೇಕಿದೆ. ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್​​ ಮಗ ಸಂದೀಪ್​ ದೀಕ್ಷಿತ್​ ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.