ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ:ಅಶೋಕ್ ಕೆಂಡಾಮಂಡಲ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಶನಿವಾರ ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ಕೊಯ್ದಿದ್ದು ಈಗ ಪಶು ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ದ್ದಾರೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಘಟನೆ ಬಗ್ಗೆ ಕಿಡಿ ಕಾರಿದರು. ಈ ಭಾಗದಲ್ಲಿ ಡ್ರಗ್ಸ್, ಗಾಂಜಾ ಸೇವನೆ ಹೆಚ್ಚಿದ್ದರೂ ಪೊಲೀಸರು ಇದಕ್ಕೆ ಕಡಿವಾಣ ಹಾಕುತ್ತಿಲ್ಲ ಎಂದು ಆರೋಪಿಸಿದರು.

ಅಶೋಕ್ ಆಕ್ರೋಶ: ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ‌ ಧಾವಿಸಿ ಪರಿಶೀಲಿ ಸಿದ ಪ್ರತಿಪಕ್ಷ ನಾಯಕ ಅಶೋಕ್, ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಕ್ರಮ ವಹಿಸದಿದ್ದರೆ ಕರಾಳ ಸಂಕ್ರಾಂತಿ ‌ಆಚರಣೆ ಮಾಡುವು ದಾಗಿ ಎಚ್ಚರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಗೋವನ್ನು ಪವಿತ್ರ ಎಂದು ಪರಿಗಣಿಸಿದೆ. ಸಂಕ್ರಾಂತಿ ಹಬ್ಬದಲ್ಲೂ ಗೋವನ್ನು ಪೂಜಿಸಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಹೊಸ ವರ್ಷಕ್ಕೆ ಬೆಲೆ ಏರಿಕೆಯ ಕೊಡುಗೆ ನೀಡಿದೆ.‌ ಅದೇ ರೀತಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಸುವಿನ ಕೆಚ್ಚಲು ಕೊಯ್ದುಹಾಕುವ ಕೊಡುಗೆಯನ್ನು ನೀಡಿದೆ. ಇಂತಹ ಜಿಹಾದಿ ಮನಸ್ಥಿತಿ ಯನ್ನು ನಾನು ಈವರೆಗೆ ನೋಡಿಲ್ಲ ಎಂದು ಕಿಡಿಕಾರಿ ದರು.

ನೂರಾರು ವರ್ಷಗಳಿಂದ ಚಾಮರಾಜಪೇಟೆಯಲ್ಲಿ ಪಶು ಆಸ್ಪತ್ರೆ ಇದೆ. ಈ ಭೂಮಿಯನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಗ ಸರ್ಕಾರದ ವಿರುದ್ಧ ಪ್ರತಿಭಟಿಸುವುದರ ಜೊತೆಗೆ, ಕೋರ್ಟ್ ಮೊರೆ ಹೋಗಲಾಯಿತು. ಪ್ರತಿಭಟನೆಯ ಸಮಯದಲ್ಲಿ ಇವೇ ಹಸುಗಳನ್ನುತೋರಿಸಲಾಗಿತ್ತು. ಅದಕ್ಕಾಗಿಯೇ ಮಚ್ಚು, ಡ್ರ್ಯಾಗರ್ ಬಳಸಿ ಹಸುಗಳ ಕೆಚ್ಚಲು ಕೊಯ್ದು, ಕಾಲು ಕತ್ತರಿಸಲಾಗಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ನಾಯಕರು ಮತಕ್ಕಾಗಿ ದೇವಸ್ಥಾನಕ್ಕೆ ಹೋಗುತ್ತಾರೆ‌. ಆದರೆ ಯಾರಿಗೂ ಹಿಂದೂ ಧರ್ಮದ ಬಗ್ಗೆ ಶ್ರದ್ಧೆ ಇಲ್ಲ, ಹಿಂದೂಗಳಲ್ಲಿ ಭೀತಿ ಹುಟ್ಟಿಸಲು ಜಿಹಾದಿಗಳು ಹೀಗೆ ಮಾಡಿದ್ದರೂ ಕಾಂಗ್ರೆಸ್ ನಾಯಕರು ಇದನ್ನು ಖಂಡಿಸುವುದಿಲ್ಲ. ಈಗ ಯಾವ ಮುಖ ಇಟ್ಟುಕೊಂಡು ಸಂಕ್ರಾಂತಿ ಆಚರಣೆ ಮಾಡುತ್ತಾರೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಕರಾಳ ಸಂಕ್ರಾಂತಿ ಆಚರಿಸುತ್ತೇವೆ ಎಂದು ಕಡಕ್ಕಾಗಿ ಹೇಳಿ ದರು.

ಎಸಿಪಿ ಜೊತೆ ಮಾತಾಡಿದ್ದು, ತಕ್ಷಣ ಕ್ರಮ ವಹಿಸುವಂತೆ ಸೂಚಿಸಿದ್ದೇನೆ. ಇಲ್ಲವಾದರೆ ತೀವ್ರವಾದ ಪ್ರತಿಭಟನೆ ಮಾಡುತ್ತೇವೆ. ಕಾಂಗ್ರೆಸ್ ಸಚಿವರು, ಮುಖ್ಯಮಂತ್ರಿ ಈ ಕಡೆ ತಿರುಗಿಯೂ ನೋಡಿಲ್ಲ ಎಂದು ಅಶೋಕ್ ಅಸಮಾಧಾನ ವ್ಯಕ್ತಪಡಿಸಿದರು

ಚಾಮರಾಜಪೇಟೆಯಲ್ಲಿ ಮಾದಕ ವಸ್ತು ದಂಧೆ ನಡೆಯುತ್ತಿದೆ. ಆಸ್ಪತ್ರೆ, ಮೆಡಿಕಲ್ ಸ್ಟೋರ್ ಗಳಲ್ಲಿ ಮಾತ್ರೆ, ಔಷಧಿಗಳನ್ನು ಮಾದಕ ವಸ್ತುಗಳಾಗಿ ಬಳಸಲಾಗುತ್ತಿದೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದೆ. ಆದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಹೋರಾಟ ಮುಂದುವರಿ ಯಲಿದೆ. ಶ್ರೀರಂಗಪಟ್ಟಣ ಸೇರಿದಂತೆ ಎಲ್ಲ ಕಡೆ ಪಹಣಿ ತಿದ್ದುಪಡಿ ಮಾಡಲು ಆಗ್ರಹಿಸುತ್ತೇನೆ ಎಂದರು.