ಮೈಸೂರು: ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಘಟನೆ ಹಸಿರಾಗಿರುವಾಗಲೇ ಹಸುವಿನ ಮೇಲೆ ದಾಳಿ ನಡೆಸಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಈ ಅಮಾನವೀಯ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿರುವ ನಂಜುಂಡೇಶ್ವರ ದೇವಾಲಯ ಬಳಿ ನಡೆದಿದ್ದು,ಕಿಡಿಗೇಡಿಗಳು ಹಸುವಿನ ಬಾಲಕ್ಕೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ.
ನಂಜನಗೂಡಿನ ನಂಜುಡೇಶ್ವರ ದೇವಾಲಯಕ್ಕೆ ಹರಕೆ ರೂಪದಲ್ಲಿ ಹಸುಗಳನ್ನ ಧಾನವಾಗಿ ಭಕ್ತರು ನೀಡುತ್ತಾರೆ.
ಅಂತಹ ಹಸುಗಳನ್ನು ಕಳ್ಳತನ ಮಾಡಲು ಯತ್ನಿಸಿರುವ ಗೋ ಕಳ್ಳರು ಈ ಸಂದರ್ಭದಲ್ಲಿ ಹಸುವಿನ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಅದರ ಬಾಲಕ್ಕೆ ತೀವ್ರ ಸ್ವರೂಪದ ಗಾಯ ಮಾಡಿದ್ದಾರೆ.ಇದರಿಂದ ಪಟ್ಟಣದ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿರುವ ಹಸುವಿಗೆ ಪಶುವೈದ್ಯರು ಚಿಕಿತ್ಸೆ ನೀಡಿದ್ದಾರೆ.
ಹಸುವಿನ ಮೇಲೆ ದಾಳಿ ಮಾಡಿರುವ ಸಂಬಂಧ ನಂಜನಗೂಡು ಟೌನ್ ಪೊಲೀಸರು ದಾಖಲಿಸಿದ್ದಾರೆ.
ಡಿವೈಎಸ್ಪಿ ರಘು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.