ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿಲ್ಲ: ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿಲ್ಲ,ಪ್ರತಿಪಕ್ಷದ ನಾಯಕರು ಸುಮ್ಮನೆ ಆರೋಪ ಮಾಡಬಾರದು ಎಂದು ಗೃಹಸಚಿವ
ಡಾಕ್ಟರ್ ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.

ನಿನ್ನೆಯಷ್ಟೇ ಸುದ್ದಿಗೋಷ್ಠಿ ಕರೆದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯದಲ್ಲಿ ಕಾನೂನು‌‌ ಸುವ್ಯವಸ್ಥೆ ಹದಗೆಟ್ಟಿದೆ ಎಂದು ಅಸರೋಪಿಸಿದ್ದರು.

ಈ ಬಗ್ಗೆ ಇಂದು ಮಾಧ್ಯಮ ದವರೊಂದಿಗೆ ಮಾತನಾಡಿದ ಪರಮೇಶ್ವರ್, ಜನರ ರಕ್ಷಣೆ ಮಾಡುವವರೇ ಇಲ್ಲದಂತಾಗಿದೆ ಎಂದು ಹೇಳಿರುವುದು ಸರಿಯಲ್ಲ,ಬಿಜೆಪಿ ಅವಧಿಯಲ್ಲಿ ಎಷ್ಟು ದರೋಡೆ, ಎಷ್ಟು ಅತ್ಯಾಚಾರಗಳು ನಡೆದಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಬೇಕಾಬಿಟ್ಟಿ ಆರೋಪ ಮಾಡಬೇಡಿ ಎಂದು ಹೇಳಿದರು.

ಬಿಜೆಪಿ ಅವಧಿಯಲ್ಲಿ ನಡೆದ ದರೋಡೆಗಳು, ಅತ್ಯಾಚಾರಗಳ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇವೆ ಎಂದು ‌ತಿಳಿಸಿದರು.