ದರ್ಶನ್‌ ಸೇರಿ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್‌

ನವದೆಹಲಿ: ದರ್ಶನ್‌, ಪವಿತ್ರ ಗೌಡ ಸೇರಿದಂತೆ ಇತರೆ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೆ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.

ಈ ವೇಳೆ ಹೈಕೋರ್ಟ್ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿ ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ ಕೋರ್ಟ್‌ ವಿಚಾರಣೆಯನ್ನು ಮುಂದೂಡಿತು.

ಮುಂದಿನ ವಿಚಾರಣೆಯಲ್ಲಿ ಆರೋಪಿಗಳ ಪರ ವಕೀಲರು ಜಾಮೀನು ನೀಡಿದ್ದನ್ನು ಸಮರ್ಥಿಸಿಕೊಂಡರೆ, ಪೊಲೀಸರ ಪರ ವಕೀಲರು ಜಾಮೀನು ನೀಡಬಾರದು ಎಂದು ವಾದ ಮಂಡಿಸಲಿದ್ದಾರೆ. ಎರಡೂ ಕಡೆಯ ವಾದವನ್ನು ಆಲಿಸಿದ ಬಳಿಕ ಸುಪ್ರೀಂ ಕೋರ್ಟ್‌ ತನ್ನ ಆದೇಶವನ್ನು ಪ್ರಕಟಿಸಲಿದೆ.