ಕೊಳ್ಳೇಗಾಲ: ಕೊಳ್ಳೇಗಾಲ ದಿಂದ ಊಟಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪುನರಾರಂಭ ವಾಗಿದ್ದು,ಪ್ರಯಾಣಿಕರು ಖಷಿಯಾಗಿದ್ದಾರೆ.
ಈ ಹಿಂದೆ ಕಳೆದ 15 ವರ್ಷಗಳಿಂದ ನಿರಂತರವಾಗಿ ಕೊಳ್ಳೇಗಾಲ- ಊಟಿ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ಸು ಕಾರಣಾಂತರಗಳಿಂದ ಹಾಗೂ ಕರ್ನಾಟಕ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣ ಆರಂಭಿಸಿದ್ದರಿಂದ ಈ ಮಾರ್ಗದ ಬಸ್ ಸಂಚಾರವನ್ನು ಸ್ಥಗಿತ ಗೊಳಿಸಲಾಗಿತ್ತು.
ನೀಲಗಿರಿ ಜಿಲ್ಲೆಯಲ್ಲಿ ಟೀ ಎಸ್ಟೇಟ್ ಗಳಲ್ಲಿ ವಾಸಿಸುತ್ತಿರುವ ಕನ್ನಡ ಜನತೆಯ ಕೋರಿಕೆಯ ಮೇರೆಗೆ ಕರ್ನಾಟಕ ಸರ್ಕಾರ ಮತ್ತೆ ಈ ಮಾರ್ಗದ ಬಸ್ ಸಂಚಾರವನ್ನು ಪುನರಾರಂಭಿಸಿದೆ.
ಕೊಳ್ಳೇಗಾಲ ಶಾಸಕ ಎ. ಆರ್. ಕೃಷ್ಣಮೂರ್ತಿ ಅವರು ಬಸ್ ಸಂಚಾರಕ್ಕೆ ಚಾಲನೆ ನೀಡಿದರು.ಈ ವೇಳೆ ಜನತೆ ಸಂತಸ ವ್ಯಕ್ತಪಡಿಸಿದರು.