ನವದೆಹಲಿ: ಮಂಡ್ಯ ಲೋಕಸಭಾ ಕ್ಷೇತ್ರದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಹಾಗೂ ವರ್ತುಲ ರಸ್ತೆ ನಿರ್ಮಾಣ ಸಂಬಂಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಹೆದ್ದಾರಿ- ಭೂಸಾರಿಗೆ ಖಾತೆ ಸಚಿವ ನಿತಿನ್‌ಗಡ್ಕರಿ ಅವರನ್ನು ಭೇಟಿ ಮಾಡಿದರು.
ನಿತಿನ್ ಗಡ್ಕರಿ ಅವರೊಂದಿಗೆ ಈ ಸಂಬಂಧ ಕುಮಾರಸ್ವಾಮಿ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಿದರು.
ಅಲ್ಲದೆ, ಕೋಲಾರ ಲೋಕಸಭಾ ಕ್ಷೇತ್ರ ಸೇರಿ ಕರ್ನಾಟಕದ ಹಲವಾರು ಹೆದ್ದಾರಿ ಯೋಜನೆಗಳ ಮಂಜೂರಾತಿ ಹಾಗೂ ಚಾಲ್ತಿಯಲ್ಲಿರುವ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸುವ ಬಗ್ಗೆ ಗಡ್ಕರಿ ಅವರೊಂದಿಗೆ ಚರ್ಚಿಸಿದರು.
ಕುಮಾರಸ್ವಾಮಿ ಅವರ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಈ ವೇಳೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಕೋಲಾರ ಸಂಸದ ಮಲ್ಲೇಶ್ ಬಾಬು ಹಾಜರಿದ್ದರು.