ಮೈಸೂರು: ಹಾಲಿನ ದರ ಏರಿಕೆ ಹಿನ್ನೆಲೆಯಲ್ಲಿ
ಸರ್ಕಾರದ ಗಮನ ಸೆಳೆಯಲು ಕರ್ನಾಟಕ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಹಾಲು, ಮೊಸರನ್ನು ತಲೆ ಮೇಲೆ ಹೊತ್ತು ಅಣುಕು ಪ್ರದರ್ಶನ ಮಾಡಿ ವಿನೂತನ ಪ್ರತಿಭಟನೆ ಮಾಡಿದರು.
ಮೈಸೂರಿನ ಡಿ ದೇವರಾಜ ಅರಸು ರಸ್ತೆಯಲ್ಲಿ ಕರ್ನಾಟಕ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಹಾಲು ಮತ್ತು ಮೊಸರು ದರವನ್ನು ಮೂರು ಬಾರಿ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಅಣಕು ಪ್ರದರ್ಶನ ಮಾಡುವ ಮೂಲಕ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್,ರಾಜ್ಯ ಸರ್ಕಾರ ರೈತರ ಹೆಸರಿನಲ್ಲಿ ವರ್ಷದಲ್ಲಿ ಮೂರು ಬಾರಿ ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರ ಮೇಲೆ ಬರೆ ಎಳೆಯುತ್ತಿರುವುದು ಖಂಡನೀಯ ಎಂದು ಹೇಳಿದರು.
ರಾಜ್ಯ ಸರ್ಕಾರ ದಿವಾಳಿಯಾಗಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ, ಒಂದೇ ವರ್ಷದಲ್ಲಿ ಮೂರು ಬಾರಿ ಹಾಲಿನ ದರ ಹೆಚ್ಚಳ ಮಾಡಿದ್ದಾರೆ, ಒಂದು ವರ್ಷದಲ್ಲಿ ಎರಡು ಬಾರಿ ವಿದ್ಯುತ್ ಹೆಚ್ಚಳ ಮಾಡಿದ್ದಾರೆ, ದಿನನಿತ್ಯ ವಸ್ತುಗಳು ಏಕಾಏಕಿ ಏರಿಸುತ್ತಿರುವುದು ಸರಿಯಲ್ಲ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಬಹಳ ತೊಂದರೆಯಾಗು ತ್ತಿದ್ದು ಸರ್ಕಾರ ಈ ಕೂಡಲೇ ಇದರ ಬಗ್ಗೆ ಗಮನ ಆರಿಸಿ ಏರಿಕೆಯನ್ನು ಕೈಬಿಡಬೇಕೆಂದು ಒತ್ತಾಯಿ ಸಿದರು.
ಮಂಜುನಾಥ್,ಎಸ್ ಎನ್ ರಾಜೇಶ್, ರವಿ, ಪ್ರಮೋದ್, ನಿತಿನ್, ಯತೀಶ್, ಬಾಬು, ಕಣ್ಣನ್, ಚಂದ್ರು, ಸಂತೋಷ್, ರವಿ, ಉಮೇಶ್, ಈಶ್ವರ, ಬೆಳಕು ಮಂಜು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.